ಪರಮೇಶ್ವರ್, ರಾಜಣ್ಣ, ಜಯಚಂದ್ರಗೆ ಪಟ್ಟ ಫಿಕ್ಸಾ?

ತುಮಕೂರು ಜಿಲ್ಲೆಯಿಂದ ಮಂತ್ರಿಯಾಗೋರು ಯಾರು?

153

Get real time updates directly on you device, subscribe now.


ತುಮಕೂರು: ರಾಜ್ಯದ ಮುಖ್ಯಮಂತ್ರಿ ಯಾರಾಗ್ತಾರೆ ಎಂಬ ದೊಡ್ಡ ಚರ್ಚೆ ನಡುವೆ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸಿಎಂ ಪಟ್ಟಕ್ಕಾಗಿ ಪಟ್ಟು ಹಿಡಿದಿದ್ದಾರೆ. ಇದರ ನಡುವೆ ತುಮಕೂರು ಜಿಲ್ಲೆಯಿಂದ ಯಾರು ಮತ್ರಿಯಾಗಲಿದ್ದಾರೆ ಎಂಬ ಚರ್ಚೆಯೂ ಶುರುವಾಗಿದೆ. ಜಿಲ್ಲೆಯಲ್ಲಿ ಈ ಬಾರಿ ಏಳು ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದು ಕಿಂಗ್ ಎನಿಸಿದೆ. ಇತ್ತ ಗೆದ್ದಿರುವ ನಾಯಕರು ಮಂತ್ರಿ ಸ್ಥಾನ ಪಡೆಯಲು ಲಾಬಿ ಶುರು ಮಾಡಿದ್ದಾರೆ.

ತುಮಕೂರು ಜಿಲ್ಲೆಗೆ ಈ ಬಾರಿ ಮೂರು ಮಂತ್ರಿ ಸ್ಥಾನ ದೊರೆಯುವ ನಿರೀಕ್ಷೆ ಇದೆ. ಹಾಗಾದ್ರೆ ಮಂತ್ರಿ ಸ್ಥಾನ ಪಡೆಯುವುದರಲ್ಲಿ ಮುಂಚೂಣಿಯಲ್ಲಿರುವ ನಾಯಕರು ಅನ್ನೋದರ ವಿವರ ಇಲ್ಲಿದೆ.

ಡಾ.ಜಿ.ಪರಮೇಶ್ಚರ್
ಕೊರಟಗೆರೆ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಭರ್ಜರಿ ಜಯಭೇರಿ ಬಾರಿಸಿರುವ ಡಾ.ಜಿ.ಪರಮೇಶ್ವರ್ ಈ ಬಾರಿ ಮತ್ತೆ ಉಪ ಮುಖ್ಯಮಂತ್ರಿ ಸ್ಥಾನ ಪಡೆಯುವುದು ಖಚಿತ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರೆನಿಸಿರುವ ಪರಮೇಶ್ವರ್ ಹೈಕಮಾಂಡ್ ಮಟ್ಟದಲ್ಲೂ ತಮ್ಮದೇ ಆದ ವರ್ಚಸ್ಸು ಹೊಂದಿದ್ದಾರೆ. ದಲಿತ ಸಿಎಂ ಕೂಗು ಕೇಳಿ ಬಂದಾಗಲೆಲ್ಲಾ ಪರಮೇಶ್ವರ್ ಹೆಸರು ಮುಂಚೂಣಿಗೆ ಬರುತ್ತೆ, ಆದರೆ ಸಿಎಂ ಸ್ಥಾನ ಸಿಗುವುದು ಅಷ್ಟು ಸುಲಭದ ಮಾತಲ್ಲ. ಸಿದ್ದು, ಡಿಕೆಶಿ ಪೈಪೋಟಿ ನಡುವೆ ಸಿಎಂ ಪಟ್ಟ ಯಾರಿಗೆ ಒಲಿಯಲಿದೆಯೋ ಗೊತ್ತಿಲ್ಲ. ಆದರೆ ಪರಂಗೆ ಡಿಸಿಎಂ ಪಟ್ಟ ಫಿಕ್ಸ್ ಎನ್ನಲಾಗಿದೆ.

ಟಿ.ಬಿ.ಜಯಚಂದ್ರ
ಶಿರಾ ಕ್ಷೇತ್ರದಲ್ಲಿ ಗೆದ್ದಿರುವ ಮಾಜಿ ಸಚಿವ ಟಿ.ಬಿ.ಜಯಚಂದ್ರ ಈ ಬಾರಿ ಸಚಿವರಾಗುವುದು ಖಚಿತ ಎನ್ನಲಾಗಿದೆ. ಜಿಲ್ಲೆಯಲ್ಲಿ ಪ್ರಭಾವಿ ಒಕ್ಕಲಿಗ ನಾಯಕರೆನಿಸಿರುವ ಜಯಚಂದ್ರ ಕಾಂಗ್ರೆಸ್ ಸರ್ಕಾರವಿದ್ದಾಗ ಸಚಿವರಾಗಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಶಿರಾ ತಾಲ್ಲೂಕಿಗೆ ಹೇಮಾವತಿ ನೀರು ಹರಿಸಿ ಆಧುನಿಕ ಭಗೀರಥ ಎಂಬ ಖ್ಯಾತಿಗೂ ಒಳಗಾಗಿದ್ದಾರೆ. ಈ ಬಾರಿ ಸಚಿವ ಸ್ಥಾನ ಸಿಗುವುದು ಖಚಿತ, ಸ್ಪೀಕರ್ ಹುದ್ದೆ ನನಗೆ ಇಷ್ಟ ಇಲ್ಲ ಎಂದು ಹೇಳಿ ಬಿಟ್ಟಿದ್ದಾರೆ.ಹಿಂದೆ ನಿರ್ವಹಿಸಿದ ನೀರಾವರಿ ಹಾಗೂ ಕಾನೂನು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ.


ಕೆ.ಎನ್.ರಾಜಣ್ಣ
ಮಧುಗಿರಿ ಕ್ಷೇತ್ರದಿಂದ ಜಯ ಗಳಿಸಿರುವ ಕೆ.ಎನ್.ರಾಜಣ್ಣ ಅವರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರೇ ಸಿಎಂ ಆಗಬೇಕು. ಅವರ ಪರವೇ ನಾನು ಓಟ್ ಮಾಡಿದ್ದೇನೆ ಎಂದು ಹೇಳಿಕೆ ನೀಡಿರುವ ರಾಜಣ್ಣ ಸಹಕಾರ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ತುಮಕೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ರಾಜಣ್ಣ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಬೆಳವಣಿಗೆ ಬಯಸಿದ್ದಾರೆ. ಈ ನಿಟ್ಟಿನಲ್ಲಿ ಸಹಕಾರ ಖಾತೆ ಸಿಕ್ಕರೆ ಅನುಕೂಲವಾಗಲಿದೆ ಎಂಬ ಮಾತುಗಳನ್ನು ಈ ಹಿಂದೆ ಹೇಳಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ರಚನೆಯಾಗುವುದು ಖಚಿತವಾಗಿದ್ದು, ರಾಜಣ್ಣ ಸಹಕಾರ ಸಚಿವರಾಗುವುದು ನಿಶ್ಚಿತ ಎನ್ನಲಾಗಿದೆ.
ಇವರಷ್ಟೇ ಅಲ್ಲದೆ ಗುಬ್ಬಿ ಕ್ಷೇತ್ರದಲ್ಲಿ ಗೆದ್ದಿರುವ ಎಸ್.ಆರ್.ಶ್ರೀನಿವಾಸ್ ಗೆ ಕೂಡ ಸಚಿವ ಸ್ಥಾನ ಸಿಗಲಿದೆ ಎಂಬ ಆಸೆಯಲ್ಲಿದ್ದಾರೆ. ಜೆಡಿಎಸ್ ನಲ್ಲಿದ್ದಾಗ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಶ್ರೀನಿವಾಸ್ ಗೆ ಸಚಿವ ಸ್ಥಾನ ಸಿಗುತ್ತಾ ಕಾದು ನೋಬೇಕು.
ಇನ್ನು ತಿಪಟೂರು ಕ್ಷೇತ್ರದಿಂದ ಗೆದ್ದಿರುವ ಹಿರಿಯ ನಾಯಕ ಕೆ.ಷಡಕ್ಷರಿ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಇದು ನನ್ನ ಕೊನೆ ಚುನಾವಣೆ ಎಂದಿರುವ ಷಡಕ್ಷರಿ ಅವರಿಗೆ ಮಂತ್ರಿಯಾಗುವ ಭಾಗ್ಯ ಇದೆಯಾ ಕಾದು ನೋಡಬೇಕು.

Get real time updates directly on you device, subscribe now.

Comments are closed.

error: Content is protected !!