ಮಹಿಳೆಯರ ರಕ್ಷಣೆ ನಮ್ಮೆರ ಹೊಣೆ

ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಿ: ಜಿಲ್ಲಾಧಿಕಾರಿ

119

Get real time updates directly on you device, subscribe now.


ತುಮಕೂರು: ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ-2005 ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯನ್ವಯ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ- 2005 ಹಾಗೂ ವರದಕ್ಷಿಣೆ ನಿಷೇಧ ಕಾಯ್ದೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸೂಕ್ತ ಸೌಲಭ್ಯ ಒದಗಿಸಬೇಕು ಎಂದು ತಿಳಿಸಿದರು.

ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ- 2005ರ ಮುಖ್ಯ ಉದ್ದೇಶವು ಮಹಿಳೆಯರ ಹಕ್ಕುಗಳನ್ನು ಪರಿಣಾಮಕಾರಿಯಾಗಿ ರಕ್ಷಿಸಿಸುವುದಾಗಿದೆ. ಕುಟುಂಬದೊಳಗೆ ನಡೆಯುವ ಯಾವುದೇ ದೈಹಿಕ, ಲೈಂಗಿಕ, ಮೌಖಿಕ, ಭಾವನಾತ್ಮಕ ಮತ್ತು ಆರ್ಥಿಕ, ದೌರ್ಜನ್ಯ ಉಂಟಾದಾಗ ನ್ಯಾಯಾಲಯದ ಮುಖಾಂತರ ಮಹಿಳೆಯರಿಗೆ ಆರ್ಥಿಕ ಪರಿಹಾರ, ರಕ್ಷಣಾ ಆದೇಶ, ವಾಸದ ಆದೇಶ, ಮಕ್ಕಳ ವಶ, ತಾತ್ಕಾಲಿಕ ಆಶ್ರಯ, ವೈದ್ಯಕೀಯ ಹಾಗೂ ಕಾನೂನು ಮೊದಲಾದ ಅವಶ್ಯಕ ನೆರವನ್ನು ಒದಗಿಸಲಾಗುತ್ತಿದೆ. ಸಾಂತ್ವನ ಕೇಂದ್ರಗಳಲ್ಲಿ ನೊಂದ ಮಹಿಳೆಯರಿಗೆ ಉಚಿತ ಕಾನೂನು ಸೇವೆ, ಕೌಟುಂಬಿಕ ಸಲಹೆ, ಆಪ್ತ ಸಮಾಲೋಚನೆ ಹಾಗೂ ಅಲ್ಪಾವಧಿ ಪುನರ್ವಸತಿಯನ್ನು ನೀಡಲಾಗುತ್ತಿದೆ ಎಂದರು.

ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಸಾಂತ್ವನ ಕೇಂದ್ರಗಳಲ್ಲಿ ಬಾಕಿ ಇರುವ 41 ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಸರ್ಕಾರೇತರ ಸಂಸ್ಥೆಗಳು, ಅಂಗನವಾಡಿ ಕಾರ್ಯಕರ್ತೆಯರು ಮಹಿಳೆಯರ ಸಂರಕ್ಷಣೆಗಾಗಿ ಇರುವ ಕಾನೂನುಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ ಮಾತನಾಡಿ ಜನವರಿ 2023 ರಿಂದ ಮಾರ್ಚ- 2023ರ ವರೆಗೆ ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯಡಿ ಸ್ವಾಂತನ ಕೇಂದ್ರಗಳಲ್ಲಿ 373 ಪ್ರಕರಣ ದಾಖಲಾಗಿದ್ದು, 361 ಪ್ರಕರಣ ಇತ್ಯರ್ಥವಾಗಿದೆ ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ.ನೂರುನ್ನಿಸ ಮಾತನಾಡಿ, ಮಹಿಳೆಯ ಸಂರಕ್ಷಣಾ ಕಾಯ್ದೆ ಬಗ್ಗೆ ಎಲ್ಲರೂ ಅರಿವು ಹೊಂದಿರಬೇಕು. ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯು ದೂರು ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಂಜುನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ, ಸಿಡಿಪಿಒಗಳು, ಶ್ರೀವೀರಭದ್ರ ಸ್ವಾಮಿ ಎಜುಕೇನ್ ಸಂಸ್ಥೆಯ ಉಮೇಶ್ ಇತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!