ಸೋಮವಾರದಿಂದ 3 ದಿನ ವಿಶೇಷ ಅಧಿವೇಶನ

698

Get real time updates directly on you device, subscribe now.


ಬೆಂಗಳೂರು: ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಬಳಿಕ ವಿಧಾನಸೌಧಕ್ಕೆ ಆಗಮಿಸಿ ಸಚಿವ ಸಂಪುಟ ಸಭೆ ನಡೆಸಿದ ಸಿದ್ದರಾಮಯ್ಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವ ಕುರಿತು ಮಾಹಿತಿ ನೀಡಿದರು.
ನಮ್ಮ ಸರ್ಕಾರ ರಚನೆ ಮೇಲೆ ಇದು ಮೊದಲ ಸುದ್ದಿಗೋಷ್ಠಿ, ನಾನು, ಡಿ.ಕೆ.ಶಿವಕುಮಾರ್, 8 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದೇವೆ. ಬೇರೆ ರಾಜ್ಯಗಳ ಸಿಎಂಗಳು, ವಿಪಕ್ಷ ನಾಯಕರು ಬಂದಿದ್ದರು, ಬಿಜೆಪಿಯೇತರ ಪಕ್ಷಗಳ ಅಧ್ಯಕ್ಷರು ಬಂದು ಶುಭಕೋರಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ಸುರ್ಜೇವಾಲ ಶುಭ ಕೋರಿದ್ದಾರೆ. ನಾವು ಸಹ ರಾಜ್ಯದ ಜನರಿಗೆ ಧನ್ಯವಾದ ಸಲ್ಲಿಸಿದ್ದೇವೆ ಎಂದರು.

ಇದೇ ವೇಳೆ ನೂತನವಾಗಿ ಆಯ್ಕೆಯಾಗಿರುವ ಶಾಸಕರಿಗೆ ಪ್ರಮಾಣ ವಚನ ಭೋದಿಸಬೇಕಿರುವ ಕಾರಣ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸಲಾಗುತ್ತದೆ. ಹಂಗಾಮಿ ಸ್ಪೀಕರ್ ಆಗಿ ಆರ್.ವಿ.ದೇಶಪಾಂಡೆ ನೇಮಕಗೊಳ್ಳಲಿದ್ದಾರೆ. ಬಳಿಕ ನೂತನ ಸ್ಪೀಕರ್ ಅವರನ್ನು ಆಯ್ಕೆ ಮಾಡಲಾಗುತ್ತದೆ. ಸೋಮವಾರ, ಮಂಗಳವಾರ, ಬುಧವಾರ ವಿಧಾನಸಭೆ ಅಧಿವೇಶನ ಕರೆಯುತ್ತಿದ್ದೇವೆ. ಹೊಸ ಸಭಾಪತಿಯನ್ನು ಆಯ್ಕೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಹೆಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹ್ಮದ್ ಖಾನ್ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!