ಸಿದ್ದು 2.0 ನೂತನ ಶಕೆ ಆರಂಭ

2ನೇ ಬಾರಿ ಸಿಎಂ ಆಗಿ ಸಿದ್ಧರಾಮಯ್ಯ ಪ್ರಮಾಣ ವಚನ, ಮೊದ ಬಾರಿ ಡಿಕೆಶಿ ಡಿಸಿಎಂ 8 ಸಚಿವರೂ ಶಪಥ- ಕಂಠೀರವದಲ್ಲಿ ಕಣ್ತುಂಬಿಕೊಂಡ ಲಕ್ಷಾಂತರ ಕಾಂಗ್ರೆಸ್ ಅನುಯಾಯಿಗಳು ಭ್ರಷ್ಟಾಚಾರ ಮುಕ್ತ ಸರ್ಕಾರದ ಭರವಸೆ ಅನೇಕ ದಿಗ್ಗಜರ ಆಗಮನ - ಶುಭ ಹಾರೈಕೆ

163

Get real time updates directly on you device, subscribe now.


ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿ.ಕೆ.ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪರಮೇಶ್ವರ್, ಮುನಿಯಪ್ಪ, ಎಂ.ಬಿ.ಪಾಟೀಲ್ ಸೇರಿ ಸಚಿವರಿಂದ ಪ್ರಮಾಣ ವಚನ ಸ್ವೀಕಾರ ಅಂತೆಯೇ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಡಾ.ಜಿ ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಎಂ.ಬಿ.ಪಾಟೀಲ್ ಸೇರಿದಂತೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಕೆ.ಜೆ.ಜಾರ್ಜ್ ಮತ್ತು ಎಂ.ಬಿ.ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದಂತೆ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮ್ಮ ತಂದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಇನ್ನು ಚಾಮರಾಜ ಪೇಟೆ ಶಾಸಕ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲಿಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

Get real time updates directly on you device, subscribe now.

Comments are closed.

error: Content is protected !!