ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಪತ್ತೆ

198

Get real time updates directly on you device, subscribe now.


ಶಿರಾ: ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಹಾಸನದ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ.

ಶಿರಾ ತಾಲೂಕಿನ ಚಿಕ್ಕಬಾಣಗೆರೆ ಗ್ರಾಮದ ಮಂಜುಳಾ, ಮಧು ಕುಮಾರ್, ಮಹಾಲಕ್ಷ್ಮಿ ಹಾಗೂ ಭಾನು ಕಣ್ಮರೆಯಾಗಿದ್ದು, ಒಂದೇ ಗ್ರಾಮದ ನಾಲ್ವರು ಮಕ್ಕಳು ಕಣ್ಮರೆಯಾಗಿದ್ದರಿಂದ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು.
ಶನಿವಾರ ಮಧ್ಯಾಹ್ನ ಆಟ ಆಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರಲಿಲ್ಲ. ಎಷ್ಟೋತ್ತಾದರೂ ಮಕ್ಕಳು ಮನೆಗೆ ಬಂದಿಲ್ಲ ಎಂದು ಗಾಬರಿಗೊಂಡ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದಾರೆ, ಆದ್ರೆ ಏನು ಪ್ರಯೋಜನವಾಗಿಲ್ಲ. ಊರೆಲ್ಲಾ ಹುಡುಕಿದರೂ ಮಕ್ಕಳು ಸಿಗದ ಕಾರಣ ಪೋಷಕರು ಶಿರಾ ತಾಲ್ಲೂಕಿನ ಪಟ್ಟನಾಯಕನ ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಾಪತ್ತೆಯಾಗಿದ್ದ ಎಲ್ಲರೂ 15 ವರ್ಷದ ವಯಸ್ಸಿನವರಾಗಿದ್ದಾರೆ. ಒಂದೇ ಗ್ರಾಮದ ಒಂದೇ ವಯಸ್ಸಿನ 4 ಮಕ್ಕಳು ನಾಪತ್ತೆಯಾಗಿರುವುದು ಹಲವು ಅನುಮಾನ ಹುಟ್ಟು ಹಾಕಿತ್ತು. ಘಟನೆ ಸಂಬಂಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗೆ ಇಳಿದಿದ್ದರು.
ಶಿಲಾ ಶಾಸರ ಟಿ.ಬಿ.ಜಯಚಂದ್ರ ಅವರು ಘಟನೆ ಸಂಬಂಧ ಪ್ರತಿಕ್ರಿಯಿಸಿದ್ದರು. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಕ್ಕಳ ಚಿತ್ರಗಳನ್ನು ಫೋಟೊ ಮಾಡಿ, ಘಟನೆ ಸಂಬಂಧ ನಾನು ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಕ್ಕಳ ಪತ್ತೆಗೆ ಸಾರ್ವಜನಿಕರ ಸಹಕಾರ ಕೂಡ ನಿರೀಕ್ಷಿತ ಎಂದು ಮನವಿ ಮಾಡಿದ್ದರು.

ಹಾಸನದ ಹೊಸ ಬಸ್ ನಿಲ್ದಾಣದಲ್ಲಿ ನಾಲ್ವರು ಮಕ್ಕಳು ಇದ್ದಿದ್ದನ್ನು ಪ್ರಶ್ನಿಸಿದಾಗ ಶಿರಾ ಮೂಲದವರು ಎಂದು ತಿಳಿದು ಬಂದಿದ್ದು, ಬೆಂಗಳೂರಿನಿಂದ ಹಾಸನಕ್ಕೆ ಬಂದಿರುವುದಾಗಿ ಹೇಳಿದ್ದು, ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹಾಸನ ಬಸ್ ನಿಲ್ದಾಣದಲ್ಲಿಯೇ ಕಳೆದ ರಾತ್ರಿ ತಂಗಿದ್ದರು ಎಂದು ತಿಳಿದು ಬಂದಿದೆ.

ಮಕ್ಕಳು ಯಾಕೆ ಮನೆ ಬಿಟ್ಟು ಹೋದರು, ಯಾರಾದರೂ ಮಕ್ಕಳನ್ನು ಕರೆದುಕೊಂಡು ಹೋದರಾ, ಅಥವಾ ಮಕ್ಕಳೇ ಎಲ್ಲಾದರೂ ಸುತ್ತಾಡಿಕೊಂಡು ಬರೋಣ ಎಂದು ಹೊರಟರಾ? ಮನೆಯಲ್ಲಿ ಹೇಳದೆ ಹೊರಟಿದ್ದು ಯಾಕೆ ಎಂಬೆಲ್ಲಾ ಪ್ರಶ್ನೆಗಳಿಗೆ ಮಕ್ಕಳ ವಿಚಾರಣೆಯಿಂದ ತಿಳಿದು ಬರಲಿದೆ. ಅಧಿಕಾರಿಗಳು ಮಕ್ಕಳ ಪೋಷಕರನ್ನು ಸಂಪರ್ಕಿಸಿದ್ದು, ಧೈರ್ಯವಾಗಿರುವಂತೆ ತಿಳಿಸಿ ಮಕ್ಕಳನ್ನು ಸೇಫಾಗಿ ಮನೆ ತಲುಪಿಸಲು ವ್ಯವಸ್ಥೆ ಕೈಗೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!