61 ಲೀಟರ್ ಕ್ರಿಮಿನಾಶಕ ವಶ

220

Get real time updates directly on you device, subscribe now.


ಗುಬ್ಬಿ: ಕೇವಲ ರಸಗೊಬ್ಬರ ಮಾರಲು ಅನುಮತಿ ಪಡೆದು ಕಾನೂನು ಬಾಹಿರವಾಗಿ ಕೀಟನಾಶ ಮಾರಾಟ ಮಾಡುತ್ತಿದ್ದ ನಿಟ್ಟೂರು ಹೋಬಳಿ ಎಂ.ಎನ್.ಕೋಟೆಯ ಗಂಗಾಧರೇಶ್ವರ ಟ್ರೇಡರ್ಸ್ ಕಂಪನಿ ಅಂಗಡಿಯ ಮೇಲೆ ದಾಳಿ ನಡೆಸಿ ಸುಮಾರು 61 ಲೀಟರ್ ಗಳಷ್ಟು ಕ್ರಿಮಿನಾಶಕ ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಅನಧಿಕೃತವಾಗಿ ಕೀಟನಾಶಕ ಮಾರುತ್ತಿರುವ ಬಗ್ಗೆ ದೂರು ಬಂದಿದ್ದ ಹಿನ್ನೆಲೆಯಲ್ಲಿ ಅಂಗಡಿ ಮೇಲೆ ದಾಳಿ ನಡೆಸಿದ ಕೀಟನಾಶ ಪರಿವೀಕ್ಷಕ ಹಾಗೂ ಸಹಾಯಕ ಕೃಷಿ ನಿರ್ದೇಶಕ ಜಾರಿದಳದ ಪುಟ್ಟರಂಗಪ್ಪ ದಾಳಿ ನಡೆಸಿ ಮಾಲು ಜಪ್ತಿ ಮಾಡಿದ್ದಾರೆ.
ಗಂಗಾಧರೇಶ್ವರ ಟ್ರೇಡಿಂಗ್ ಕಂಪನಿ ಮಾಲೀಕರಾದ ರಮೇಶ್ ಕುಮಾರ್ ಅವರು ಕಾನೂನು ಬಾಹಿರವಾಗಿ ಕೀಟನಾಶಕ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ್ದಾರೆ. ವಿವಿಧ ಕಂಪನಿಯ ಕೀಟನಾಶಕಗಳನ್ನು ಅನಧಿಕೃತವಾಗಿ ಮಾರಾಟ ಮಾಡುತ್ತಿದ್ದು ಅಧಿಕಾರಿಗಳು ಸಮಗ್ರ ತನಿಖೆ ನಡೆಸಿ ಮಾಲು ಜಪ್ತಿ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕೀಟನಾಶಕ ಪರಿವೀಕ್ಷಕ ಹಾಗೂ ಸಹಾಯಕ ಕೃಷಿ ನಿರ್ದೇಶಕ ಜಾರಿ ದಳದ ಪುಟ್ಟರಂಗಪ್ಪ ಮಾತನಾಡಿ, ವಶಪಡಿಸಿಕೊಂಡಿರುವ ಕೀಟನಾಶಕಗಳ ಮಾದರಿ ತೆಗೆದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ನಂತರ ನ್ಯಾಯಾಲಯದ ಅನುಮತಿ ಪಡೆದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸಂಬಂಧಪಟ್ಟ ಸರಬರಾಜು ದಾರರು ಹಾಗೂ ಮಾರಾಟಗಾರರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಇಂತಹ ಅನಧಿಕೃತ ಮಾರಾಟಗಾರರ ಹಾವಳಿ ಹೆಚ್ಚಾಗುತ್ತಿರುವುದು ಗಮನಕ್ಕೆ ಬರುತ್ತಿದೆ. ಅಂತಹ ಅಂಗಡಿಗಳ ಮೇಲೆ ಮಿಂಚಿನ ದಾಳಿ ನಡೆಸಿ ಕ್ರಮ ಕೈಗೊಳ್ಳಲಾಗುವುದು, ಸಾರ್ವಜನಿಕರು ಇಲಾಖೆಯ ಅಧಿಕಾರಿಗಳಿಗೆ ಸಹಕಾರ ನೀಡಿದಲ್ಲಿ ಇಂತಹ ಅನಧಿಕೃತ ಮಾರಾಟ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದ ಅವರು ಪರವಾನಗಿ ಇಲ್ಲದೆ ಕ್ರಿಮಿನಾಶಕ ಅಥವಾ ರಸಗೊಬ್ಬರ ಮಾರಾಟ ಮಾಡುತ್ತಿರುವವರ ಮೇಲೆ ನಿರ್ದಾಕ್ಷಣವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾನೂನು ಬಾಹಿರವಾಗಿ ಕಳಪೆ ಗುಣಮಟ್ಟದ ಕೀಟನಾಶಕ ಮಾರಾಟ ಮಾಡುತ್ತಿರುವವರ ಮೇಲೆ ದಾಳಿ ನಡೆಸಿ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ ಎಂದರು.
ಈ ದಾಳಿಯ ಸಂದರ್ಭದಲ್ಲಿ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!