ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ತುಮಕೂರು ವಿಭಾಗದ ವತಿಯಿಂದ ಕರ್ನಾಟಕ ರಾಜ್ಯಾದಾದ್ಯಂತ ಮಹಿಳೆಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಜೂನ್ 11 ರಂದು ಮಧ್ಯಾಹ್ನ 12.30 ಗಂಟೆಗೆ ತುಮಕೂರು ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಗುವುದು.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಶಕ್ತಿ ಯೋಜನೆಗೆ ಚಾಲನೆ ನೀಡುವರು. ಸಹಕಾರ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸುವರು.
ಸಂಸದರಾದ ಜಿ.ಎಸ್.ಬಸವರಾಜು, ಡಿ.ಕೆ.ಸುರೇಶ್, ಜಗ್ಗೇಶ್, ಶಾಸಕರಾದ ಎಸ್.ಆರ್.ಶ್ರೀನಿವಾಸ್, ಹೆಚ್.ಡಿ.ರಂಗನಾಥ್, ಟಿ.ಬಿ.ಜಯಚಂದ್ರ, ಕೆ.ಷಡಕ್ಷರಿ, ಸಿ.ಬಿ.ಸುರೇಶ್ ಬಾಬು, ಬಿ.ಸುರೇಶ್ ಗೌಡ, ಎಂ.ಟಿ.ಕೃಷ್ಣಪ್ಪ, ಹೆಚ್.ವಿ.ವೆಂಕಟೇಶ್, ವಿಧಾನ ಪರಿಷತ್ ಶಾಸಕರಾದ ಕೆ.ಎ.ತಿಪ್ಪೇಸ್ವಾಮಿ, ವೈ.ಎ.ನಾರಾಯಣ ಸ್ವಾಮಿ, ಚಿದಾನಂದ ಎಂ. ಗೌಡ, ಆರ್.ರಾಜೇಂದ್ರ, ಮಹಾ ಪೌರರಾದ ಪ್ರಭಾವತಿ ಸುಧೀಶ್ವರ್ ಸೇರಿದಂತೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು ಹಾಜರಿರುವರು.
ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎನ್.ವಿ.ಪ್ರಸಾದ್, ಕ.ರಾ.ರ.ಸಾ.ನಿ.ದ ನಿರ್ದೇಶಕರಾದ ಪ್ರಶಾಂತ್ ಕುಮಾರ್ ಮಿಶ್ರ, ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ ವಾಡ್ ಸೇರಿದಂತೆ ಕ.ರಾ.ರ.ಸಾ.ನಿ. ತುಮಕೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಎ.ಎನ್.ಗಜೇಂದ್ರ ಕುಮಾರ್, ಆಡಳಿತ ಮತ್ತು ಸಿಬ್ಬಂದಿ ವರ್ಗ ಭಾಗವಹಿಸುವರು.
Comments are closed.