ಬಿಡುಗಡೆಯಾದ ಅನುದಾನಕ್ಕೆ ನಿರ್ಬಂಧ ಬೇಡ

ಗೃಹ ಸಚಿವ ಡಾ.ಜಿ.ಪರಮೇಶ್ವರ್ಗೆ ವಿವಿಧ ಮಠಾಧೀಶರ ಮನವಿ

216

Get real time updates directly on you device, subscribe now.


ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ವಿಚಾರದಲ್ಲಿ ಹೇರಿರುವ ನಿರ್ಬಂಧವನ್ನು ಮಠಮಾನ್ಯಗಳು, ದೇವಾಲಯಗಳ ಅಭಿವೃದ್ಧಿ ವಿಚಾರದಲ್ಲಿ ಸಡಿಲಗೊಳಿಸಿ ಸಹಾಯ ಮಾಡುವಂತೆ ಜಿಲ್ಲೆಯ ವಿವಿಧ ಮಠಾಧೀಶರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಮಾಡಿದ್ದಾರೆ.

ನಗರದ ಎಸ್ಎಸ್ಐಟಿಯ ಅತಿಥಿಗೃಹದಲ್ಲಿ ತಿಪಟೂರಿನ ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ವಿವಿಧ ಮಠಾಧೀಶರು, ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗೆ ಸರ್ಕಾರ ಸಹಾಯ ಮಾಡಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ರುದ್ರಮುನಿ ಸ್ವಾಮೀಜಿ ಅವರು ಡಾ.ಜಿ.ಪರಮೇಶ್ವರ್ ಅವರು ಗೃಹ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಅವರನ್ನು ಭೇಟಿ ಮಾಡಿ ಗೌರವ ಸಮರ್ಪಿಸಲಾಗಿದೆ. ಜೊತೆಗೆ ಜಿಲ್ಲೆಗೆ ಅಗತ್ಯವಾಗಿ ಬೇಕಾಗಿರುವ ಅವಶ್ಯಕತೆಗಳ ಬಗ್ಗೆಯೂ ಅವರೊಂದಿಗೆ ಚರ್ಚಿಸಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಹಾದು ಹೋಗಿರುವ ಎತ್ತಿನಹೊಳೆ ಯೋಜನೆ, ಹೇಮಾವತಿ ನೀರಿನ ವಿಚಾರದ ಬಗ್ಗೆಯೂ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.
ತುಮಕೂರು ಇಡೀ ಪ್ರಪಂಚಕ್ಕೆ ಕೊಬ್ಬರಿ ರವಾನೆ ಮಾಡುವಂತಹ ಜಿಲ್ಲೆ, ಆದರೆ ಕೊಬ್ಬರಿ ಬೆಲೆ ಕುಸಿದಿದ್ದು, ಕೇವಲ 8500 ರೂ. ಗಳಿಗೆ ಇಳಿಕೆಯಾಗಿದೆ. ಇದರಿಂದ ರೈತರು ಜೀವನ ನಡೆಸುವುದು ತುಂಬಾ ಕಷ್ಟಕರವಾಗಿದೆ. ಹಾಗಾಗಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ 15 ಸಾವಿರ ರೂ. ಗಳನ್ನಾದರೂ ನಿಗದಿಗೊಳಿಸುವಂತೆ ಒತ್ತಾಯ ಮಾಡಲಾಗಿದೆ ಎಂದರು.

ಈ ಹಿಂದಿನ ಸರ್ಕಾರ ಕರ್ನಾಟಕದ ಸಾವಿರಾರು ಮಠಮಾನ್ಯಗಳಿಗೆ ಅನುದಾನ ನೀಡಿರುವುದು ಗೊತ್ತಿರುವ ವಿಚಾರ, ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಹ, ಇನ್ನಿತರ ಕಾರಣಗಳಿಂದಾಗಿ ಎಲ್ಲಾ ಇಲಾಖೆಗಳಿಗೂ ನಿರ್ಬಂಧ ಹೇರಲಾಗಿದೆ. ಈ ನಿರ್ಬಂಧವನ್ನು ಧಾರ್ಮಿಕ ಸಂಸ್ಥೆಗಳಿಗಾದರೂ ಸಡಿಲಗೊಳಿಸಿ ಮಠಗಳು, ದೇವಾಲಯಗಳ ಅಭಿವೃದ್ಧಿಗೆ, ಸಂಸ್ಥೆಗಳ ಅಭಿವೃದ್ಧಿಗೆ ಸಹಾಯ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಸುಮಾರು 500ಕ್ಕೂ ಹೆಚ್ಚು ಜನ ಸ್ವಾಮೀಜಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಜಿಲ್ಲೆಯ ಅಭಿವೃದ್ಧಿ, ಕರ್ನಾಟಕದ ಅಭಿವೃದ್ಧಿ ಬಗ್ಗೆ ಚರ್ಚಿಚಿ ಗಮನ ಸೆಳೆಯಲಾಗುವುದು ಎಂದು ಶ್ರೀಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾಲಕ್ಷ್ಮೀ ಪೀಠದ ಜ್ಞಾನಾನಂದಪುರಿ ಸ್ವಾಮೀಜಿ, ಚಕ್ರಬಾವಿಯ ಜಂಗಮ ಮಠದ ಸಿದ್ದಲಿಂಗ ಸ್ವಾಮೀಜಿ, ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಸ್ವಾಮೀಜಿ, ಮಾದಿಹಳ್ಳಿ ಏಳುಮಠದ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!