ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಿ

177

Get real time updates directly on you device, subscribe now.


ತುಮಕೂರು: ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆ ಅಡಿಯಲ್ಲಿ ರಾಜ್ಯಾದ್ಯಂತ ಇರುವ ಸರ್ಕಾರಿ ಶಾಲೆಗಳಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿರುವ ಬಿಸಿಯೂಟ ತಯಾರಿಕರಿಗೆ ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಜುಲೈ ತಿಂಗಳಿನಲ್ಲಿ ಮಂಡಿಸುವ ಬಜೆಟ್ ನಲ್ಲಿ ಬಿಸಿಯೂಟ ತಯಾರಕರಿಗೆ ಅವರ ವೇತನವನ್ನು ಆರು ಸಾವಿರ ರೂಪಾಯಿಗಳಿಗೆ ಹೆಚ್ಚಿಸಬೇಕೆಂದು ಬಿಸಿ ಊಟ ತಯಾರಕರ ಫೆಡರೇಶನ್ ಸಂಯೋಜಿತ ರಾಜ್ಯಸಮಿತಿ ಕರೆಯ ಮೇರೆಗೆ ತುಮಕೂರು ಜಿಲ್ಲಾ ಸಮಿತಿ ವತಿಯಿಂದ ತುಮಕೂರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಐಟಿಯುಸಿ ನಾಯಕರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿರವರು ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಚರ್ಚಿಸಿ ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸಿ ಅಧಿಕಾರಕ್ಕೆ ಬಂದರೆ ನಮ್ಮ ಸರ್ಕಾರ ಆರನೇ ಗ್ಯಾರಂಟಿಯಾಗಿ ಬಿಸಿಯೂಟ ತಯಾರಕರಿಗೆ ಈಗಿರುವ ವೇತನಕ್ಕೆ ಬದಲಾಗಿ 6,000 ಗಳನ್ನ ಹೆಚ್ಚಿಸಲಾಗುವುದೆಂದು ಬೆಳಗಾವಿಯ ಚುನಾವಣಾ ಪ್ರಚಾರದ ವೇದಿಕೆಯಲ್ಲಿ ಘೋಷಿಸಿದ್ದರು. ಅದರಂತೆ ಈ ಬಾರಿ ಕಾಂಗ್ರೆಸ್ ಸರ್ಕಾರವು ತಮ್ಮ ಪ್ರಣಾಳಿಕೆಯಲ್ಲಿ 6ನೇ ಗ್ಯಾರಂಟಿಯಾಗಿ ಘೋಷಿಸಿ 2023ರ ಜುಲೈ ತಿಂಗಳಿನಲ್ಲಿ ಕರ್ನಾಟಕ ಸರ್ಕಾರ ಮಂಡಿಸುವ ನೂತನ ಬಜೆಟ್ನಲ್ಲಿ ಬಿಸಿಯೂಟ ತಯಾರಕರಿಗೆ 6000 ವೇತನ ಹೆಚ್ಚಿಸಬೇಕೆಂದು ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಎಐಟಿಯುಸಿ ಜಿಲ್ಲಾ ಸಂಚಾಲಕ ಕಾಂತರಾಜು, ಉಮಾದೇವಿ, ವನಜಾಕ್ಷಿ, ಪಾರ್ವತಮ್ಮ, ರಾಧಮ್ಮ, ಪುಷ್ಪಲತಾ, ಸಾವಿತ್ರಮ್ಮ, ಲಕ್ಷ್ಮಮ್ಮ, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಗಿರೀಶ್, ಕಂಬೇಗೌಡ ಸೇರಿದಂತೆ ಹಲವರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!