ತುಮಕೂರು: ವಿಶ್ವ ರಕ್ತ ದಾನಿಗಳ ದಿನದ ಅಂಗವಾಗಿ ನಗರದ ವಿದ್ಯಾವಾಹಿನಿ ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕಾಲೇಜು ಮತ್ತು ವಿದ್ಯಾವಾಹಿನಿ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಸೋಸಿಯೇಷನ್ ಸರ್ಜನ್ಸ್ ಆಫ್ ಇಂಡಿಯಾದ ಕರ್ನಾಟಕ ಸ್ಟೇಟ್ ಚಾಪ್ಟರ್ ನ ತುಮಕೂರು ನಗರ ವಿಭಾಗ, ಸಂಜೀವಿನಿ ಬ್ಲಡ್ ಬ್ಯಾಂಕ್, ಸಿದ್ದಗಂಗಾ ಆಸ್ಪತ್ರೆ ರಕ್ತ ನಿಧಿ, ಹೆಚ್ ಡಿಎಫ್ ಸಿ ಬ್ಯಾಂಕ್, ತುಮಕೂರು ಇವರ ಸಹಯೋಗದೊಂದಿಗೆ ಈ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ್ ಮಾತನಾಡಿ, ರಕ್ತದಾನ ಎಲ್ಲಾ ದಾನಗಳಿಗಿಂತಲೂ ಶ್ರೇಷ್ಠವಾಗಿದ್ದು, ಇಂತಹ ಮಹಾನ್ ಕಾರ್ಯಗಳಿಗೆ ಸಂಸ್ಥೆ ಹಾಗೂ ವಿದ್ಯಾರ್ಥಿಗಳ ಸಹಕಾರ ಎಂದಿಗೂ ಇರುತ್ತದೆ ಎಂದು ತಿಳಿಸಿದರು.
ನಿಯಮಿತವಾಗಿ ರಕ್ತ ದಾನ ಮಾಡುವುದರಿಂದ ದೇಹಾರೋಗ್ಯ ಹಾಗೂ ಸಾಮಾಜಿಕ ಸ್ವಾಸ್ಥ್ಯ ನಿರ್ಮಾಣವಾಗುತ್ತದೆ ಎಂದರು.
ಸಿದ್ದಗಂಗಾ ಮೆಡಿಕಲ್ ಕಾಲೇಜಿನ ಪೆಥಾಲಜಿ ವಿಭಾಗದ ಪ್ರೊ.ಡಾ.ಹರೀಶ್ ಮಾತನಾಡಿ, ಅಪಘಾತ ಹಾಗೂ ಇನ್ನಿತರ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ರಕ್ತದ ಅವಶ್ಯಕತೆ ಅತ್ಯಗತ್ಯವಾಗಿರುತ್ತದೆ. ಹಣವನ್ನು ಭವಿಷ್ಯಕ್ಕಾಗಿ ಕೂಡಿಡುವಂತೆ, ಜೀವ ಹನಿಯಾದ ರಕ್ತವನ್ನು ಸಹ ಶೇಖರಿಸಿ ಜತನದಿಂದ ಕಾಪಾಡಿಟ್ಟುಕೊಂಡರೆ ಅಪಾರ ಜೀವಗಳನ್ನು ಉಳಿಸಿಕೊಳ್ಳಬಹುದು. ಸದೃಡ ಹಾಗೂ ಚೈತನ್ಯದಾಯಕ ಆರೋಗ್ಯಕ್ಕಾಗಿ ರಕ್ತದಾನ ಸಹಾಯಕಾರಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಸೋಸಿಯೇಷನ್ ಸರ್ಜನ್ಸ್ ಆಫ್ ಇಂಡಿಯಾದ ಕರ್ನಾಟಕ ಸ್ಟೇಟ್ ಚಾಪ್ಟರ್ ನ ಗೌರವ ಕಾರ್ಯದರ್ಶಿ ಹಾಗೂ ಭಾರತೀಯ ವೈದ್ಯಕೀಯ ಸಂಘ, ತುಮಕೂರು ವಿಭಾಗದ ಅಧ್ಯಕ್ಷ ಡಾ.ಎನ್.ಚಂದ್ರಶೇಖರ್, ಅಸೋಸಿಯೇಷನ್ ಸರ್ಜನ್ಸ್ ಆಫ್ ಇಂಡಿಯಾ, ತುಮಕೂರು ವಿಭಾಗದ ಅಧ್ಯಕ್ಷ ಡಾ.ಬಿ.ಎನ್.ಪ್ರಶಾಂತ್, ಕಾರ್ಯದರ್ಶಿ ಹಾಗೂ ಶ್ರೀದೇವಿ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪ್ರೊ.ಡಾ.ಚೇತನ್, ಕಾಲೇಜಿನ ಪ್ರಾಂಶುಪಾಲರಾದ ಸಿ.ಎಸ್.ಪ್ರೇಮ್, ಸಂಜೀವಿನಿ ಬ್ಲಡ್ ಬ್ಯಾಂಕ್ ನ ಉಪಾಧ್ಯಕ್ಷ ಅರುಣ್ ಕುಮಾರ್, ಹೆಚ್ ಡಿಎಫ್ ಸಿ ಬ್ಯಾಂಕ್ ನ ಬ್ರ್ಯಾಂಚ್ ಆಪರೇಷನ್ ಮ್ಯಾನೇಜರ್ ವಿಜಯ್ ಕುಮಾರ್, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದರು.
ಸುಮಾರು 200 ಕ್ಕೂ ಮಿಗಿಲಾಗಿ ವಿದ್ಯಾವಾಹಿನಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ರಕ್ತದಾನ ಮಾಡಿ ವಿಶ್ವ ರಕ್ತ ದಾನಿಗಳ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
Comments are closed.