ಭೀಕರ ಅಪಘಾತದಲ್ಲಿ ಇಬ್ಬರ ಸಾವು

ಕಾರು, ಲಾರಿ ಮುಖಾಮುಖಿಯಾಗಿ ಅವಘಡ- ಐವರ ಸ್ಥಿತಿ ಗಂಭೀರ

9,732

Get real time updates directly on you device, subscribe now.


ಕೊರಟಗೆರೆ: ತಾಲ್ಲೂಕಿನ ಸಿ.ಎನ್.ದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಬಳಿ ತುಮಕೂರು- ಮಧುಗಿರಿ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಮೃತರಾದವರನ್ನು ದಾವಣೆಗೆರೆ ಮೂಲದ ಶಿವು ನಾಯಕ್ ( 32), ಕೊಡಿಗೇನಹಳ್ಳಿಯ ಪರಮೇಶ್ ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಸುಮಾರು 3 ಗಂಟೆ ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿ ಕಡೆಗೆ ವಾಪಸ್ ಬರುತಿದ್ದ ಯುವಕರ ತಂಡದಲ್ಲಿದ್ದ ಐವರು ತೀವ್ರವಾಗಿ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಿಮ್ಹಾನ್ಸ್ ಕರೆದುಕೊಂಡು ಹೋಗಲಾಗಿದೆ.

ಕಾರಿನಲ್ಲಿ ಒಟ್ಟು 7 ಜನರು ಪ್ರಯಾಣಿಸುತ್ತಿದ್ದರು. ದಾಬಸ್ ಪೇಟೆಯಲ್ಲಿ ಮದುವೆ ಮುಗಿಸಿ ತುಮಕೂರು ಮೂಲಕ ಕೊಡಿಗೇನಹಳ್ಳಿ ಕಡೆ ಹೋಗುತ್ತಿದ್ದರು. ಆಂಧ್ರದಿಂದ ತುಮಕೂರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Get real time updates directly on you device, subscribe now.

Comments are closed.

error: Content is protected !!