ರೈಲಿನಿಂದ ಬಿದ್ದು ವ್ಯಕ್ತಿ ಸಾವು

181

Get real time updates directly on you device, subscribe now.


ಕುಣಿಗಲ್: ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವ ಕೆಳಕ್ಕೆ ಧುಮುಕಿ ಮೃತ ಪಟ್ಟಿರುವ ಘಟನೆ ಶುಕ್ರವಾರ ಮಧ್ಯಾಹ್ನ ತಾಲೂಕಿನ ನಡೆಮಾವಿನಪುರ ಸೇತುವೆ ಬಳಿಸಂಭವಿಸಿದೆ.

ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ನೀಡಿದ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತನು ಅಂದಾಜು 28 ವರ್ಷದ ಯುವಕ ಎನ್ನಲಾಗಿದ್ದು ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ರೈಲು ತೆರಳುತ್ತಿದ್ದು, ಪ್ರಕರಣವನ್ನು ರೈಲ್ವೆ ಪೊಲೀಸರಿಗೆ ವರ್ಗಾಯಿಸಿದ್ದಾರೆ. ಮೃತನ ಜೇಬಿನಲ್ಲಿ ಯಾವುದೇ ಚೀಟಿ ಲಭ್ಯವಾಗದ ಕಾರಣ ಮೃತನ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

Get real time updates directly on you device, subscribe now.

Comments are closed.

error: Content is protected !!