ಕಾಂಗ್ರೆಸ್ ನುಡಿದಂತೆ ನಡೆದುಕೊಂಡಿದೆ: ಡಿಕೆಶಿ

ಗ್ಯಾರೆಂಟಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲಮಿತಿ ಇಲ್ಲ

196

Get real time updates directly on you device, subscribe now.


ಚಿಕ್ಕನಾಯಕನಹಳ್ಳಿ: ಗ್ಯಾರೆಂಟಿ ಯೋಜನೆಗೆ ಅರ್ಜಿ ಸಲ್ಲಿಸಲು ಕಾಲ ಮೀತಿ ನಿಗದಿ ಮಾಡಿಲ್ಲ. ಯಾವುದೇ ಗೊಂದಲವಿಲ್ಲದೆ ನಿಗದಿಪಡಿಸಿದ ದಾಖಲಾತಿಯೊಂದಿಗೆ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯದಲ್ಲಿನ ಎಲ್ಲಾ ವರ್ಗಕ್ಕೂ ಅನುಕೂಲವಾಗುವ ರೀತಿಯಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ನುಡಿದಂತೆ ನಡೆದುಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ತಾಲೂಕಿನ ಹಂದನಕೆರೆ ಸಬ್ಬೇನಹಳ್ಳಿಯ ಸಿದ್ದರಬೆಟ್ಟದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಸ್ಥಾನ ಸಿಗಲಿ ಎಂದು ಶ್ರೀ ಸಿದ್ದೇಶ್ವರಸ್ವಾಮಿ ಬಳಿ ಪ್ರಾರ್ಥನೆ ಸಲ್ಲಿಸಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ, ಪ್ರಾರ್ಥನೆ ಫಲ ನೀಡಿದೆ. ಗೃಹ ಲಕ್ಷ್ಮೀ, ಗೃಹ ಜೋತಿ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಸಹ ಯಾವುದೇ ಶುಲ್ಕ ನೀಡುವ ಅವಶ್ಯಕತೆ ಇಲ್ಲ. ಮಧ್ಯವರ್ತಿಗಳಿಗೆ ಅವಕಾಶ ನೀಡದೆ ನೇರವಾಗಿ ಫಲಾನುಭವಿಗಳೇ ಅರ್ಜಿ ಸಲ್ಲಿಸಬಹುದಾಗಿದೆ. ಯಾರಾದರು ಅಧಿಕಾರಿಗಳು ಲಂಚ ಕೇಳಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪ್ರತಿ ಭೇಟಿಯೂ ಸಾಕ್ಷಿಯಾಗಿರಬೇಕು
ಶ್ರೀ ಹರಿಹರೇಶ್ವರ ದೇವಾಲಯ ಹಳೆಯದಾಗಿದ್ದು ಜೀರ್ಣೋದ್ಧಾರ ಮಾಡಲು ತಹಶೀಲ್ದಾರ್ ಅವರಿಗೆ ತಿಳಿಸಿದ್ದೇನೆ. ಈ ಭಾಗಕ್ಕೆ ನನ್ನಿಂದ ಏನಾದರು ಸಹಾಯ ಬೇಕಿದ್ದರೆ ಸ್ಥಳೀಯ ನಾಯಕರಿಗೆ ತಿಳಿಸಿ ನಾನು ಅಭಿವೃದ್ಧಿ ಕೆಲಸಕ್ಕೆ ಪೂರಕವಾದ ಯೋಜನೆ ನೀಡುತ್ತೆನೆ. ಪುಣ್ಯಸ್ಥಳಕ್ಕೆ ಭೇಟಿ ನೀಡಿದ್ದು ಸಾಕ್ಷಿಯಾಗಿರಬೇಕು ಎಂದರು.

ಪಕ್ಷಾತೀತವಾಗಿ ಡಿಕೆಶಿಗೆ ಸ್ವಾಗತ
ಉಪ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತಾಲೂಕಿಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಅವರಿಗೆ ಪಕ್ಷಾತೀತವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ಖಾಸಗಿ ಕಾರ್ಯಕ್ರಮವಾದರು ಸಹ ಕ್ಷೇತ್ರದ ಶಾಸಕ ಸಿ.ಬಿ ಸುರೇಶ್ ಬಾಬು ಸಹ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಷಯ ತಿಳಿಸಿದರು.

ರೋಡ್ ಶೋ ಮೂಲಕ ಶ್ರೀ ಸಿದ್ದೇಶ್ವರಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಡಿ.ಕೆ.ಶಿವಕುಮಾರ್ ದೇವರಿಗೆ ವಿಶೇಷ ಪೂಜೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುಣಿಗಲ್ ಶಾಸಕ ರಂಗನಾಥ್, ತಿಪಟೂರು ಶಾಸಕ ಷಡಕ್ಷರಿ, ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್, ಬಿ.ಲಕಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!