ಕಾಂಗ್ರೆಸ್ ಕೊಟ್ಟಿರುವ ಭರವಸೆ ಈಡೇರಿಸಲಿ

ಕೇಂದ್ರದ ಮೇಲೆ ಆರೋಪ ಮಾಡುವುದು ನಿಲ್ಲಿಸಿ - ತುಮಕೂರಲ್ಲಿ ಬಿಜೆಪಿ ಕಿಡಿ

164

Get real time updates directly on you device, subscribe now.


ತುಮಕೂರು: ಅಕ್ಕಿ ನೀಡುತ್ತಿಲ್ಲ ಎಂದು ಅಲ್ಲ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ ಇತ್ತ ಸುಳ್ಳು ಆಶ್ವಾಸನೆ ನೀಡಿದ್ದೀರಿ. ನೀವು ಗ್ಯಾರಂಟಿಗಳನ್ನು ಈಡೇರಿಸಲು ಆಗದೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದೀರಿ ಎಂದು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಟೌನ್ ಹಾಲ್ ಬಳಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕುಂಟು ನೆಪ ಹೇಳಿ ಬಡವರಿಗೆ ಅಕ್ಕಿ ಕೊಡಲು ಇಲ್ಲ ಸಲ್ಲದ ನೆಪ ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ನಗರ ಶಾಸಕ ಜ್ಯೋತಿಗಣೇಶ್ ಮಾತನಾಡಿ, ಸುಳ್ಳು ಭರವಸೆ ಕೊಟ್ಟು ಈಗ ಈಡೇರಿಸಲಾಗದೆ ಕಾಂಗ್ರೆಸ್ ಒದ್ದಾಡುತ್ತಿದೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಬದಲು ಕೊಟ್ಟ ಭರವಸೆಗಳನ್ನು ಈಡೇರಿಸಿ ಮರ್ಯಾದೆ ಉಳಿಸಿಕೊಳ್ಳಲಿ ಎಂದು ಹೇಳಿದರು.

ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಬಿಜೆಪಿ ಮೇಲೆ ದೂರುವುದು ನಿಲ್ಲಬೇಕು. ಆಗದೆ ಇರುವ ಭರವಸೆಗಳನ್ನು ಯಾಕೆ ನೀಡಬೇಕಿತ್ತು. ಆಶ್ವಾಸನೆ ಕೊಟ್ಟ ಮೇಲೆ ಅವುಗಳನ್ನು ಈಡೇರಿಸಬೇಕು. ಅದು ಬಿಟ್ಟು ಕುಂಟು ನೆಪ ಹೇಳುವುದು ತರವಲ್ಲ ಎಂದರು.

ಚುನಾವಣೆ ಪ್ರಚಾರ ವೇಳೆ ಗ್ಯಾರಂಟಿ ಘೋಷಣೆ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆಗ ಪ್ರಧಾನಿ ಮೋದಿ ಅವರನ್ನು ಕೇಳಿ ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ರಾ? ಈ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಅವರ ಬಗ್ಗೆ ಹಗುರವಾಗಿ ಮಾತಾಡುವುದು ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಹೆಬ್ಬಾಕ ರವಿ ಮಾತನಾಡಿ, ನರೇಂದ್ರ ಮೋದಿ ಸರ್ಕಾರದ ಮೇಲೆ ಆರೋಪ ಮಾಡುವುದು ನಿಲ್ಲಿಸಿ ಕೊಟ್ಟಿರುವ ಭರವಸೆಯನ್ನು ಕಾಂಗ್ರೆಸ್ ಈಡೇಸಬೇಕು. ಭರವಸೆ ಈಡೇರದಿದ್ದರೆ ಬಿಜೆಪಿ ಹೋರಾಟ ಮುಂದುವರೆಸಲಿದೆ ಎಂದು ಎಚ್ಚರಿಕೆ ನೀಡಿದರು.

ರಾಜ್ಯದ ಜನರಿಗೆ ಕಾಂಗ್ರೆಸ್ ಸುಳ್ಳು ಭರವಸೆ ನೀಡಿದೆ. ಗ್ಯಾರಂಟಿಗಳನ್ನು ಜಾರಿ ಮಾಡಿಯೇ ಸಿದ್ಧ ಎಂದು ಹೇಳುವ ಕಾಂಗ್ರೆಸ್ ನಾಯಕರು ಖಂಡಿಷನ್ ಬೇರೆ ಹಾಕುತ್ತಿದ್ದಾರೆ. ಕಾಂಗ್ರೆಸ್ ನ ಯೋಜನೆಗಳು ಜನರಿಗೆ ತಲುಪುವುದು ಕಷ್ಟವಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಜನರೇ ಕಾಂಗ್ರೆಸ್ ಗೆ ಛೀಮಾರಿ ಹಾಕಲಿದ್ದಾರೆ ಎಂದರು.

ಮುಖಂಡ ವೈ.ಹೆಚ್.ಹುಚ್ಚಯ್ಯ ಮಾತನಾಡಿ, ಭರವಸೆ ಈಡೇರಿಸಲಾಗದ ಕಾಂಗ್ರೆಸ್ ಈಗ ಬಾಯಿ ಬಡಿದುಕೊಳ್ಳುತ್ತಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಮೇಲೆ ಸಿದ್ದರಾಮಯ್ಯ ಆರೋಪ ಮಾಡುವುದು ನಿಲ್ಲಿಸಬೇಕು. ಜನರು ನಿಮ್ಮ ನಾಟಕವನ್ನು ನೋಡುತ್ತಿದ್ದಾರೆ. ಬಿಜೆಪಿ ಮೇಲೆ ಆರೋಪ ಮಾಡುವುದು ಬಿಟ್ಟು ಜನರಿಗೆ ಕೊಟ್ಟಿರುವ ಭರವಸೆ ಈಡೇರಿಸಿ ಮರ್ಯಾದೆ ಉಳಿಸಿಕೊಳ್ಳಿ ಎಂದು ಕಿಡಿ ಕಾರಿದರು.

ಮುಖಂಡರಾದ ಶಿವಪ್ರಸಾದ್, ಚಿದಾನಂದ್, ಬ್ಯಾಟರಂಗೇಗೌಡ, ರಮೇಶ್, ನರಸಿಂಹಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!