ಕುಣಿಗಲ್: ಇಂದಿರಾ ಕ್ಯಾಂಟೀನ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ, ಬಡ ಜನರು, ಕೂಲಿ ಕಾರ್ಮಿಕರು ಹಸಿವು ನೀಗಿಸಿಕೊಳ್ಳಲು ಕ್ಯಾಂಟೀನ್ ಗೆ ಭೇಟಿ ನೀಡುತ್ತಾರೆ. ಆಹಾರ ಗುಣಮಟ್ಟ ಕಾಪಾಡುವ ಜೊತೆಯಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪುರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಂಡ ನಂತರ ತಾಲೂಕು ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ದೀಡೀರ್ ಭೇಟಿ ನೀಡಿ ಕ್ಯಾಂಟೀನ್ ಶೌಚಾಲಯ ಬೀಗ ಹಾಕಿರುವ ಬಗ್ಗೆ ಪರಿಸರ ಅಭಿಯಂತರರನ್ನು ತರಾಟೆಗೆ ತೆಗೆದುಕೊಂಡ ಅವರು ಶೌಚಾಲಯ ಇರುವುದು ಕ್ಯಾಂಟೀನ್ ಗೆ ಭೇಟಿ ನೀಡುವವರ ಬಳಕೆಗೆ, ಅದಕ್ಕೆ ಬೀಗ ಹಾಕುವುದು ಸರಿಯಲ್ಲ, ಸ್ವಚ್ಛತೆ ನಿರ್ವಹಣೆಗೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ ಜಿಲ್ಲಾಧಿಕಾರಿ, ಕ್ಯಾಂಟೀನ್ ಒಳಗಿರುವ ಫ್ರಿಡ್ಜ್, ಶುದ್ಧ ಕುಡಿಯುವ ನೀರು ಘಟಕ ಹಾಗೂ ಬಿಸಿನೀರು ಪೂರೈಕೆ ನಿಟ್ಟಿನಲ್ಲಿ ಅಳವಡಿಸಲಾದ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗದಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿ ಕೂಡಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಉಪ ವಿಭಾಗಾಧಿಕಾರಿ ಹೋಟೆಲ್ ಶಿವಪ್ಪ, ತಹಶೀಲ್ದಾರ್ ಮಹಬಲೇಶ್ವರ್, ಮುಖ್ಯಾಧಿಕಾರಿ ಶಿವಪ್ರಸಾದ್ ಇತರರು ಇದ್ದರು.
Comments are closed.