ದಲಿತರ ಸಮಸ್ಯೆ ನಿವಾರಣೆಗೆ ಹೋರಾಟ ಅನಿವಾರ್ಯ

224

Get real time updates directly on you device, subscribe now.


ತುಮಕೂರು: ಧರ್ಮ, ಜಾತಿ ತಾರತಮ್ಯ ಮಾಡದೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳ ಅಡಿಯಲ್ಲಿ ಎಲ್ಲಾ ಜಾತಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕಾರ್ಯನಿರ್ವಹಿಸಬೇಕು ಎಂದು ದಸಂಸ ನೂತನ ಪದಾಧಿಕಾರಿಗಳಿಗೆ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಪಿ.ಎನ್.ರಾಮಯ್ಯ ಕರೆ ನೀಡಿದರು.

ನಗರದ ಜಿಲ್ಲಾ ದಲಿತ ಸಂಘರ್ಷ ಸಮಿತಿ ಕಚೇರಿಯಲ್ಲಿ ಏರ್ಪಡಿಸಿದ್ದ ಮುಖಂಡರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ದಲಿತ ಸಂಘರ್ಷ ಸಮಿತಿ ಬಲಪಡಿಸಬೇಕು. ನಗರ, ತಾಲ್ಲೂಕು, ಗ್ರಾಮಗಳಲ್ಲಿರುವ ಅಸ್ಪಶ್ಯತೆ, ಜಾತಿಯತೆಯಂತಹ ಸಮಸ್ಯೆಗಳ ನಿವಾರಣೆಗೆ ಶ್ರಮಿಸಬೇಕು ಎಂದರು.

ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಶವ ಸಂಸ್ಕಾರ ಮಾಡುವುದಕ್ಕೆ ಇಂದಿಗೂ ಭೂಮಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದಲ್ಲದೆ ದಲಿತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪ, ಚರಂಡಿ ಮುಂತಾದ ಸಮಸ್ಯೆಗಳಿದ್ದು, ಈ ಸಮಸ್ಯೆಗಳ ನಿವಾರಣೆಗೆ ಹೋರಾಟ ಮಾಡಿ ನ್ಯಾಯ ಕೊಡಿಸಬೇಕು ಎಂದು ಹೇಳಿದರು.

ತುಮಕೂರು ಜಿಲ್ಲಾ ಕಚೇರಿ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡಬೇಕು. ಡಾ.ಬಾಬು ಜಗಜೀವನ್ ರಾಂ ಭವನ ಶಂಕುಸ್ಥಾಪನೆ ಇದುವರೆಗೂ ಆಗಲಿಲ್ಲ ಕೂಡಲೇ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಬೇಕು. ತುಮಕೂರು ನಗರದ ಹೃದಯಭಾಗದಲ್ಲಿರುವ ಎಂ.ಜಿ.ರಸ್ತೆಯ ಅಂಬೇಡ್ಕರ್ ಭವನ 20 ವರ್ಷಗಳಿಂದ ಪೂರ್ಣಗೊಳ್ಳಲಿಲ್ಲ. ಹೀಗೆ ಹತ್ತು ಹಲವು ಸಮಸ್ಯೆಗಳು ರಾಜಕೀಯ ಮುಖಂಡರ ಇಚ್ಚಾಶಕ್ತಿ ಕೊರತೆಯಿಂದ ಬಗೆ ಹರಿದಿಲ್ಲ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ದಸಂಸ ಸಂಘಟನೆ ಬಗ್ಗೆ ಆಸಕ್ತಿ ಇಲ್ಲದ ತಾಲ್ಲೂಕು ಮತ್ತು ನಗರ ಕಾರ್ಯಕರ್ತರನ್ನು ವಜಾ ಮಾಡಿ, ಹೊಸ ಯುವಕರಿಗೆ, ನಗರದ ಕಾರ್ಯಕರ್ತರಿಗೆ ಆಧ್ಯತೆ ನೀಡುವ ಮೂಲಕ ಪುನಶ್ಚೇತನಗೊಳಿಸಲಾಯಿತು.
ಸಭೆಯಲ್ಲಿ ಆರ್ಪಿಐಬಿ ಪಕ್ಷದ ಜಿಲ್ಲಾಧ್ಯಕ್ಷ ಚಿಗ್ಗಾವಿ ಪುಟ್ಟಸ್ವಾಮಿ, ಜಿಲ್ಲಾ ಸಂಘಟನಾ ಅಧ್ಯಕ್ಷೆ ಲಕ್ಷ್ಮಮ್ಮ, ಜಿಲ್ಲಾಧ್ಯಕ್ಷ ಬೆಣ್ಣೇನಹಳ್ಳಿ ರಾಜು, ತಿಪಟೂರು ತಾಲ್ಲೂಕು ಅಧ್ಯಕ್ಷೆ ಜಯಮ್ಮ, ಶಿರಾ ತಾಲ್ಲೂಕು ಅಧ್ಯಕ್ಷ ಸಲ್ಮಾ, ಅಲ್ಪ ಸಂಖ್ಯಾತರ ಅಧ್ಯಕ್ಷ ಯೂಸಫ್, ಗುಬ್ಬಿ ತಾಲ್ಲೂಕು ಅಲ್ಪಸಂಖ್ಯಾತರ ಅಧ್ಯಕ್ಷರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!