ಕುಣಿಗಲ್: ಪಟ್ಟಣದ ನೈರ್ಮಲ್ಯ ಕಾಪಾಡಲು ಹಗಲಿರುಳು ಶ್ರಮಿಸುವ ಪೌರ ಕಾರ್ಮಿಕರಿಗೆ ನಿವೇಶನ ಕಲ್ಪಿಸಲು ಸರ್ಕಾರದಲ್ಲಿ ವ್ಯವಸ್ಥೆ ಇದ್ದರೂ ಪುರಸಭೆಯಲ್ಲಿ ಇನ್ನು ನಿವೇಶನ ಕಲ್ಪಿಸಿಲ್ಲದ ಕಾರಣ ತಮಗೆ ನಿವೇಶನ ವ್ಯವಸ್ಥೆ ಮಾಡುವಂತೆ ಶಾಸಕ ಡಾ.ರಂಗನಾಥ್ ಅವರಿಗೆ ಪೌರ ಕಾರ್ಮಿಕರು ಮನವಿ ಸಲ್ಲಿಸಿದರು.
ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡಿದ್ದ ಶಾಸಕ ಡಾ.ರಂಗನಾಥ್ ಅವರನ್ನು ಪೌರ ಕಾರ್ಮಿಕ ಸಂಘದ ಅಧ್ಯಕ್ಷೆ ಸರಸ್ವತಮ್ಮ ನೇತೃತ್ವದಲ್ಲಿ ಭೇಟಿ ಮಾಡಿದ ಪೌರಕಾರ್ಮಿಕರು ತಮ್ಮ ಅಳಲು ತೋಡಿಕೊಂಡರು. ಪೌರ ಕಾರ್ಮಿಕರಿಗೆ ನಿವೇಶನ ಕಲ್ಪಿಸಿ ವಸತಿ ವ್ಯವಸ್ಥೆ ಮಾಡಲು ಸರ್ಕಾರವು ವಿವಿಧ ಯೋಜನೆಯ ಮೂಲಕ ಕಾರ್ಯಕ್ರಮ ರೂಪಿಸಿದೆ. ಇದರಂತೆ ಕೊರಟಗೆರೆ, ಮಧುಗಿರಿ, ತಿಪಟೂರು ಹಾಗೂ ಚಿಂತಾಮಣಿ ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೆ ಪೌರ ಕಾರ್ಮಿಕರಿಗೆ ನಿವೇಶನ, ವಸತಿ ವ್ಯವಸ್ಥೆ ಕಲ್ಪಿಸಲಾಗಿದ್ದು ತಾಲೂಕಿನಲ್ಲೂ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸಿದರು. ಪೌರ ಕಾರ್ಮಿಕರಿಂದ ಮನವಿ ಸ್ವೀಕರಿಸಿದ ಶಾಸಕರು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
Comments are closed.