ಮುಂಗಾರು ತಡ- ರೈತರಿಗೆ ಆತಂಕ ಬೇಡ: ಕೆಎನ್ ಆರ್

6,652

Get real time updates directly on you device, subscribe now.


ಮಧುಗಿರಿ: ಈ ಬಾರಿ ಮುಂಗಾರು ತಡವಾಗಿ ಆರಂಭವಾಗಿದ್ದು, ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಸರ್ಕಾರ ನಿಮ್ಮೊಂದಿಗಿದೆ ಎಂದು ಸಹಕಾರ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಬೇಸಾಯ ಚಟುವಟಿಕೆ ಆರಂಭವಾಗಿದ್ದು, ಈ ಬಾರಿ ಹಾಸನ ಸೇರಿದಂತೆ ರಾಜ್ಯಾದ್ಯಂತ ಮುಂಗಾರು ತಡವಾಗಿದ್ದು ಆರಂಭವಾಗಿದ್ದು, ಸರ್ಕಾರದ ವತಿಯಿಂದ ಬೀಜ, ರಸಗೊಬ್ಬರ ಶೇಖರಣೆ ಮಾಡಿಕೊಳ್ಳಲಾಗಿದೆ. ಈಗಾಗಲೇ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದು, ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸಕಾಲಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಒದಗಿಸಲಾಗುವುದು ಎಂದರು.

ತಾಲೂಕಿನಾದ್ಯಂತ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಲ್ಲಾ ಗ್ರಾಪಂಗಳಲ್ಲೂ ಕ್ರಮ ವಹಿಸಲಾಗಿದೆ. ಪಟ್ಟಣದಲ್ಲಿ ಯುಜಿಡಿ ವಿಳಂಬ ಕಾಮಗಾರಿಗೆ ಸಂಬಂಧಿಸಿದಂತೆ ಸಂಬಂಧಪಟ್ಟವರ ಬಳಿ ಚರ್ಚಿಸಿದ್ದು, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದರು.

ಜಿಪಂ ಇಇ ಸುರೇಶ್ ರೆಡ್ಡಿ, ಡಿಡಿಪಿಐ ಮಂಜುನಾಥ್, ಡಿವೈಎಸ್ಪಿ ವೆಂಕಟೇಶ್ ನಾಯ್ಡು, ತಾಪಂ ಇಓ ಲಕ್ಷ್ಮಣ್, ತಾಪಂ ಎಡಿಓ ಮಧುಸೂದನ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಹನುಮಂತರಾಯಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆದಿನಾರಾಯಣ ರೆಡ್ಡಿ, ಗೋಪಾಲಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೆಂಕಟರಂಗಾರೆಡ್ಡಿ, ತಾಲೂಕು ಅಧ್ಯಕ್ಷ ಸಂಜಯ್ ಇತರರಿದ್ದರು.

Get real time updates directly on you device, subscribe now.

Comments are closed.

error: Content is protected !!