ತುಮಕೂರು: ಪ್ರಸ್ತುತ ಸ್ಫರ್ಧಾತ್ಮಕ ಪ್ರಂಪಚದಲ್ಲಿ ವಿದ್ಯಾರ್ಥಿಗಳು ಸದಾ ಮುಂಚೂಣಿಯಲ್ಲಿರಲು ಪಠ್ಯಕ್ರಮದ ಜ್ಞಾನದೊಂದಿಗೆ ಪೂರಕವಾದ ಪ್ರಾಯೋಗಿಕ ಜ್ಞಾನದ ಅನುಭವ ಅತ್ಯಗತ್ಯವಾಗಿದೆ. ಈ ದಿಸೆಯಲ್ಲಿ ವಿವಿಧ ಕೈಗಾರಿಕೆಗಳಿಗೆ ಭೇಟಿ ನೀಡಿ ಅಲ್ಲಿನ ಕಾರ್ಯ ನಿರ್ವಹಣಾ ಪರಿಸರ, ತಾಂತ್ರಿಕತೆ, ಕೌಶಲ್ಯತೆ ಕುರಿತಾಗಿ ಪ್ರತ್ಯಕ್ಷವಾಗಿ ತಿಳಿದುಕೊಳ್ಳುವುದು ತುಂಬಾ ಪ್ರಯೋಜನಕಾರಿಯಾಗಿರುತ್ತದೆ.
ಈ ನಿಟ್ಟಿನಲ್ಲಿ ನಗರದ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನ ಮೊದಲನೇ ವರ್ಷದ ಬಿಸಿಎ ಮತ್ತು ಬಿಕಾಂ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ ಪ್ರತಿಷ್ಟಿತ ಯುನಿಬಿಕ್ ಮತ್ತು ಐಕಿಯಾ ಕೈಗಾರಿಕೆಗಳಿಗೆ ಒಂದು ದಿನದ ಕೈಗಾರಿಕಾ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.
ಹಲವಾರು ಪ್ರತಿಷ್ಟಿತ ಕಂಪೆನಿಗಳು ಹಾಗು ಕೈಗಾರಿಕೆಗಳಲ್ಲಿ ಹೆಚ್ಚು ಬೇಡಿಕೆಯಿರುವ ಕೌಶಲ್ಯಯುತ ಮಾನವ ಸಂಪನ್ಮೂಲ ರೂಪಿಸುವ ನಿಟ್ಟಿನಲ್ಲಿ, ಸಂಸ್ಥೆಯ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ಪಠ್ಯಕ್ರಮಕ್ಕೆ ಸೂಕ್ತ ಹಾಗು ಪೂರಕವಾದ ಕೈಗಾರಿಕಾ ಭೇಟಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಉತ್ಸುಕತೆಯಿಂದ ಭಾಗವಹಿಸುತ್ತಿದ್ದಾರೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್. ಬಿ.ಪ್ರದೀಪ್ ಕುಮಾರ್ ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೇಮ್, ದೈಹಿಕ ಶಿಕ್ಷಣ ನಿರ್ದೇಶಕ ಎಂ. ವಿನಯ್, ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥೆ ಸೌಜನ್ಯ ಹಾಜರಿದ್ದರು.
Comments are closed.