ರೈತ ನೇಣಿಗೆ ಶರಣು

814

Get real time updates directly on you device, subscribe now.


ಪಾವಗಡ: ಸಾಲಬಾಧೆ ತಾಳಲಾರದೆ ರೈತನೊಬ್ಬ ನೇಣಿಗೆ ಶರಣಾಗಿರುವಘಟನೆ ಗುರುವಾರ ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯ ಕಿಲಾರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ತಾಲೂಕಿನ ಕಿಲಾರ್ಲಹಳ್ಳಿ ಗ್ರಾಮಕ್ಕೆ ಸೇರಿದ ಭೀಮಪ್ಪ(62) ಎಂದು ಗುರ್ತಿಸಲಾಗಿದೆ, ಮೃತರು ಕಿಲಾರ್ಲಹಳ್ಳಿ ಗ್ರಾಮಕ್ಕೆ ಸೇರಿದವರಾಗಿದ್ದು ವ್ಯವಸಾಯ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ವ್ಯವಸಾಯಕ್ಕಾಗಿ ಬ್ಯಾಂಕ್ ಮತ್ತು ಕೈಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.

ಸಾಲಭಾದೆ ತಾಳಲಾರದೆ ಗುರುವಾರ ಬೆಳಗ್ಗೆ 9.30ರ ಸಮಯದಲ್ಲಿ ತಮ್ಮ ಜಮೀನಿನಲ್ಲಿರುವ ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಘಟನೆ ತಿಳಿದು ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದೂರು ದಾಖಲಿಸಿಕೊಂಡು ಕ್ರಮ ಜರುಗಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!