ಕ್ವಿಟ್ ಇಂಡಿಯಾ ಚಳವಳಿಯಲ್ಲಿ ಜಿಲ್ಲೆಯದ್ದು ಮಹತ್ವದ ಪಾತ್ರ

ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ

525

Get real time updates directly on you device, subscribe now.

ತುಮಕೂರು: ಕ್ವಿಟ್ ಇಂಡಿಯಾ ಚಳವಳಿಯಲ್ಲಿ ತುಮಕೂರು ಜಿಲ್ಲೆಯ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ತಿಳಿಸಿದರು.
ನಗರದ ಸ್ವಾತಂತ್ರ್ಯ ಚೌಕದಲ್ಲಿಂದು ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಹಾಗೂ ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ನಡೆದ ಉಪ್ಪಿನ ಸತ್ಯಾಗ್ರಹ ನೆನಪಿನ ಅಂಗವಾಗಿ ಹಮ್ಮಿಕೊಂಡಿದ್ದ ಗಾಂಧೀಜಿಯವರಿಗೆ “ನುಡಿನಮನ” ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಉಪ್ಪಿನ ಸತ್ಯಾಗ್ರಹದಲ್ಲಿ ಮುಂದಾಳತ್ವ ವಹಿಸಿದ್ದ ಗಾಂಧೀಜಿ ಅವರಿಗೆ ನಮನ ಸಲ್ಲಿಸುವ ಮೂಲಕ ಸ್ವಾತಂತ್ರ್ಯದ 75ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ರಾಷ್ಟ್ರಾದ್ಯಂತ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಮ್ಮಿಮುಕೊಂಡಿರುವ ಕಾರ್ಯಕ್ರಮದ ಭಾಗವಾಗಿ ಪ್ರತಿ ವಾರವೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿಯೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಮುಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಈ ವೇಳೆ ಮಹಾನಗರ ಪಾಲಿಕೆ ಮೇಯರ್ ಬಿ.ಜಿ. ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ. ವಂಶಿಕೃಷ್ಣ, ಪಾಲಿಕೆ ಆಯುಕ್ತೆ ರೇಣುಕಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ(ಪ್ರಭಾರ) ಶ್ರೀನಿವಾಸ್ ಕೆ., ಡಿಡಿಪಿಯು ನರಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡಿ., ಸುರೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!