ತುಮಕೂರು: ಶ್ರೀಮಠದಲ್ಲಿ ನಿರ್ಮಾಣವಾಗಲಿರುವ ವಿದ್ಯಾರ್ಥಿ ನಿಲಯದ ಕಟ್ಟಡದ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಹೇಳಿದರು.
ನಗರದ ಸಿದ್ದಗಂಗಾ ಮಠದ ಆವರಣದಲ್ಲಿ 9 ಕೋಟಿ 90 ಲಕ್ಷ ರೂ. ವೆಚ್ಚದ ವಿದ್ಯಾರ್ಥಿ ನಿಲಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶ್ರೀಗಳು, ಸರ್ಕಾರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ 9.90 ಕೋಟಿ ರೂ. ಅನುದಾನ ನೀಡಿದೆ. ಇದರಿಂದ ಬಡ ಮಕ್ಕಳ ವಿದ್ಯಾಭ್ಯಾಸ ಮತ್ತಷ್ಟು ಅನುಕೂಲವಾದಂತಾಗುತ್ತಿದೆ ಎಂದರು.
ಹಾಸ್ಟೆಲ್ ಕಟ್ಟಡ ಗುಣಮಟ್ಟದ ಕಾಮಗಾರಿಯೊಂದಿಗೆ ನಿರ್ಮಿಸುವಂತೆ ಭವಿಷ್ಯ ಬಿಲ್ಡ್ ಕಾರ್ಕ್ ನ ಶ್ರೀನಿವಾಸ್ ಅವರಿಗೆ ತಿಳಿಸಿದರು.
ಶ್ರೀಮಠದಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆಗೆ 9.90 ಕೋಟಿ ಅನುದಾನ ನೀಡಿರುವ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಬಿ.ಸುರೇಶ್ಗೌಡ, ಜ್ಯೋತಿಗಣೇಶ್, ಮೈದಾಳ ಗ್ರಾಪಂ ಅಧ್ಯಕ್ಷೆ ಮಾಲಾ ಮಂಜುನಾಥ್, ಜಿಪಂ ಮಾಜಿ ಸದಸ್ಯ ಜಿ.ಎಸ್.ಶಿವಕುಮಾರ್, ಭವಿಷ್ಯ ಬಿಲ್ಡ್ ಕಾರ್ಕ್ ನ ಶ್ರೀನಿವಾಸ್, ಹೊನ್ನೇಶ್ ಕುಮಾರ್ ಮತ್ತಿತರರ ಅಧಿಕಾರಿಗಳು ಹಾಜರಿದ್ದರು.
Comments are closed.