ಮರಕ್ಕೆ ಕಾರು ಡಿಕ್ಕಿ- ಸ್ಥಳದಲ್ಲೇ ಓರ್ವ ಸಾವು

15,086

Get real time updates directly on you device, subscribe now.


ತುರುವೇಕೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಮಾಯಸಂದ್ರ ಉಪಠಾಣೆ ವ್ಯಾಪ್ತಿಯ ಜೋಡಗಟ್ಟೆ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಗುಬ್ಬಿ ತಾಲೂಕಿನ ನಾಗಸಂದ್ರ ವಾಸಿ ಸುದರ್ಶನ್ (43) ಎಂದು ಗುರುತಿಸಲಾಗಿದೆ. ಕಾರು ಚಾಲನೆ ಮಾಡುತ್ತಿದ್ದ ಸುದರ್ಶನ್ ಗೆಳೆಯ ಹೇಮಂತ್ ಹಾಗೂ ಹರ್ಷಿತ್ಗೌಡ ತೀವ್ರತರ ಗಾಯಗೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಾಯಸಂದ್ರ ಕಡೆಯಿಂದ ಬೆಳ್ಳೂರು ಕಡೆಗೆ ತೆರಳುವ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಘಟನೆಯ ಸ್ಥಳ್ಕಕೆ ಪಿಎಸ್ಐ ರಾಮಚಂದ್ರ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರ ಸಂಬಂಧಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ತುರುವೇಕೆರೆ ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

Get real time updates directly on you device, subscribe now.

Comments are closed.

error: Content is protected !!