ಕುಣಿಗಲ್: ತಾಲೂಕಿನ 36 ಗ್ರಾಪಂ ಪೈಕಿ 12ಗ್ರಾಮ ಪಂಚಾಯಿತಿಯ ಎರಡನೆ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆ ಮಂಗಳವಾರ ನಡೆದಿದ್ದು ಎಲ್ಲೆಡೆ ಬಹುತೇಕ ಶಾಂತಿಯುತ ಆಯ್ಕೆ ಪ್ರಕ್ರಿಯೆ ನಡೆದಿದೆ.
ಮಡಿಕೆಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಿವಮ್ಮ, ಉಪಾಧ್ಯಕ್ಷರಾಗಿ ಶ್ರೀನಿವಾಸ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಹೇರೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಚುನಾವಣೆಯಲ್ಲಿ ರವಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಗಂಗಮ್ಮ ಅವಿರೋಧ ಆಯ್ಕೆಯಾಗಿದ್ದಾರೆ. ಸಂತೇಮಾವತ್ತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹೇಮಾಬಾಯಿ, ಉಪಾಧ್ಯಕ್ಷರಾಗಿ ಬಸವರಾಜು ಅವಿರೋಧ ಆಯ್ಕೆಯಾಗಿದ್ದಾರೆ, ಯಡವಾಣಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮನೋಜ, ಉಪಾಧ್ಯಕ್ಷರಾಗಿ ನಾಗರಾಜು ಅವಿರೋಧ ಆಯ್ಕೆಯಾಗಿದ್ದಾರೆ, ಡಿ.ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಹುಲ್ಲೂರಯ್ಯ, ಉಪಾಧ್ಯಕ್ಷರಾಗಿ ಕಲಾವತಿ ಅವಿರೋಧ ಆಯ್ಕೆಯಾಗಿದ್ದಾರೆ.
ಉಜ್ಜಿನಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಹಾದೇವಮ್ಮ ಚುನಾವಣೆಯಲ್ಲಿ ಆಯ್ಕೆಯಾದರೆ, ಪಾಧ್ಯಕ್ಷರಾಗಿ ಮಹಾಲಕ್ಷ್ಮಮ್ಮ ಅವಿರೋಧ ಆಯ್ಕೆಯಾಗಿದ್ದಾರೆ. ಕೆಂಪನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕುಮಾರ್, ಉಪಾಧ್ಯಕ್ಷರಾಗಿ ರಂಗಮ್ಮ ಅವಿರೋಧ ಆಯ್ಕೆಯಾಗಿದ್ದಾರೆ, ಅಮೃತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಲೀಲಾವತಿ, ಉಪಾಧ್ಯಕ್ಷರಾಗಿ ಭರತಕುಮಾರ್ ಅವಿರೋಧ ಆಯ್ಕೆಯಾಗಿದ್ದಾರೆ. ಕಗ್ಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರೂಪಾಗೋಪಾಲ್, ಉಪಾಧ್ಯಕ್ಷರಾಗಿ ಗಂಗಾಧರಯ್ಯ ಅವಿರೋಧ ಆಯ್ಕೆಯಗಿದ್ದಾರೆ. ಮಾರ್ಕೋನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ.ಎಸ್.ರವಿ, ಉಪಾಧ್ಯಕ್ಷರಾಗಿ ವರಲಕ್ಷ್ಮೀ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ಜೋಡಿ ಹೊಸಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ನಜ್ಮುನ್ನಿಸಾ, ಉಪಾಧ್ಯಕ್ಷರಾಗಿ ನಾರಾಯಣಪ್ಪ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ. ತರೇದಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ನಾಗರತ್ನ, ಉಪಾಧ್ಯಕ್ಷರಾಗಿ ನಾಗೇಶ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.
Comments are closed.