ಅಂಗವಿಕಲರಿಗಾಗಿ ಅರಿವು ಕಾರ್ಯಕ್ರಮ ನಾಳೆ

232

Get real time updates directly on you device, subscribe now.


ತುಮಕೂರು: ಹೆಲ್ಲನ್ ಕೆಲ್ಲರ್ ಜಯಂತಿ ಅಂಗವಾಗಿ ಪರಿವರ್ತನ ಚಾರಿಟಬಲ್ ಟ್ರಸ್ಟ್, ಪರಿವರ್ತನ ಜಾಗೃತಿ ಕಲಾತಂಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಗಾಜಿನ ಮನೆಯಲ್ಲಿ ಜುಲೈ 21ರಂದು ಬೆಳಗ್ಗೆ 10.30 ಗಂಟೆಗೆ ಅಂಗವಿಕಲರು ಮತ್ತು ಪೋಷಕರಿಗಾಗಿ ಜಿಲ್ಲಾ ಮಟ್ಟದ ಸ್ವ- ಭರವಸೆಯ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪರಿವರ್ತನ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷೆ ಟಿ.ಎಸ್.ಮಂಜುಳ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಅನುಭವಿಗಳ ಮೂಲಕ ಹಲವಾರು ಸರ್ಕಾರಿ ಕಾರ್ಯಕ್ರಮ ಮತ್ತು ಯೋಜನೆಗಳ ಬಳಕೆಯಲ್ಲಿ ವಿಕಲಚೇತನರು ಮತ್ತು ಪೋಷಕರ ಪಾತ್ರ, ಕೌಶಲ್ಯ ಸಾಮರ್ಥ್ಯ ಹಾಗೂ ಸಾಮಾಜಿಕ ಭಾವಗಹಿಸುವಿಕೆಯಲ್ಲಿ ವಿಕಲಚೇತನತರಿಗೆ ಎದುರಾಗುವ ಸವಾಲುಗಳು ಹಾಗೂ ಪರಿಹಾರಗಳ ಕುರಿತು ಮಾಹಿತಿ ನೀಡಲಾಗುವುದು. ಆರ್ಥಿಕ ಅಭಿವೃದ್ಧಿಯಲ್ಲಿ ವಿಕಲಚೇತನರು ಮತ್ತು ಪೋಷಕರ ಪಾತ್ರ ಕುರಿತು ಚರ್ಚಿಸಲಾಗುವುದು ಎಂದರು.

ಹಿರೇಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಾ.ರಮೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಶಾಸಕರಾದ ಜ್ಯೋತಿಗಣೇಶ್, ಸುರೇಶ್ಗೌಡ, ಎಸ್.ಆರ್.ಶ್ರೀನಿವಾಸ್, ಸುರೇಶ್ ಬಾಬು, ಮಾಜಿ ಶಾಸಕ ರಫಿಕ್ ಅಹ್ಮದ್, ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು ಶಾಸಕ ರವಿಕುಮಾರ್, ಮೇಯರ್ ಪ್ರಭಾವತಿ.ಎಂ, ಉಪ ಮೇಯರ್ ಟಿ.ಕೆ.ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚೀ.ನಿ.ಪುರುಷೋತ್ತಮ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಯುಕ್ತ ಅಂದು ಬೆಳಗ್ಗೆ 9.30 ಗಂಟೆಗೆ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ, ಜಿಲ್ಲೆಯ ಅಂಗವಿಕಲರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆಯಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಟ್ರಸ್ಟ್ ನ ಖಜಾಂಚಿ ಬಿ.ರವೀಂದ್ರ, ಕಾರ್ಯದರ್ಶಿ ನಂಜಾಚಾರಿ, ಸದಸ್ಯರಾದ ನಾಗವೇಣಿ, ಶಿವಾನಂದ ಇದ್ದರು.

Get real time updates directly on you device, subscribe now.

Comments are closed.

error: Content is protected !!