ಕಣ್ಣಿನ ಬಗ್ಗೆ ನಿರ್ಲಕ್ಷತೆ ಬೇಡ: ಡಾ.ಶಾಲಿನಿ

133

Get real time updates directly on you device, subscribe now.


ತುಮಕೂರು: ಕಣ್ಣಿನ ಆರೈಕೆಯಲ್ಲಿ ನಾವು ವಹಿಸುವ ನಿರ್ಲಕ್ಷ್ಯವೇ ಭವಿಷ್ಯದಲ್ಲಿ ಕಣ್ಣಿನ ಸಮಸ್ಯೆಗಳಿಗೆ ಕಾರಣವಾಗಿ ಭವಿಷ್ಯವನ್ನು ಕತ್ತಲಾಗಿಸುತ್ತವೆ ಎಂದು ಸಿದ್ಧಗಂಗಾ ಮೆಡಿಕಲ್ ಕಾಲೇಜಿನ ಪ್ರಾಚಾರ್ಯರಾದ ಡಾ.ಶಾಲಿನಿ ತಿಳಿಸಿದರು.

ನಗರದ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿಯವರ ಜನ್ಮವರ್ಧಂತಿ, ಜಿಲ್ಲಾ ಅಂಧತ್ವ ನಿಯಂತ್ರಣಾ ಕಾರ್ಯಕ್ರಮದ ಅಂಗವಾಗಿ ನಡೆದ ಉಚಿತ ಕ್ಯಾಟರ್ಯಾಕ್ಟ್ ಶಸ್ತ್ರ ಚಿಕಿತ್ಸಾ ಕಾರ್ಯಕ್ರಮದಲ್ಲಿ ಮಾತನಾಡಿ, ಸಣ್ಣ ವಯಸ್ಸಿನಿಂದಲೇ ಕಣ್ಣಿನ ಆರೋಗ್ಯದ ಬಗ್ಗೆ ಕಾಳಜಿ ಮಾಡಿ ಯಾವುದೇ ಕಣ್ಣಿನ ಸಮಸ್ಯೆ ಕಂಡು ಬಂದರೆ ವೈದ್ಯರನ್ನು ಭೇಟಿ ಮಾಡಿ, ಸಿದ್ಧಗಂಗಾ ಆಸ್ಪತ್ರೆ ಇಂತಹ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಗಳ ಮೂಲಕ ಸಾರ್ವಜನಿಕರ ಆರೋಗ್ಯ ಕಾಳಜಿಯಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದರು.

ಪ್ಯಾರಾಮೆಡಿಕಲ್ ಕಾಲೇಜಿನ ಉಪ ಪ್ರಾಂಶುಪಾಲರು ಹಾಗೂ ನೇತ್ರ ತಜ್ಞರಾದ ಡಾ.ವೀಣಾ ಪರಮೇಶ್ ಮಾತನಾಡಿ, ಬಿಪಿ, ಶಗುರ್ ನಿಯಂತ್ರಣ ಸೇರಿದಂತೆ ಸರಿಯಾದ ಆಹಾರ ಕ್ರಮ ಹಾಗೂ ಜೀವನ ಶೈಲಿಯಿಂದ ಕಣ್ಣಿನ ಸಮಸ್ಯೆಗಳಿಂದ ದೂರ ವಿರಬಹುದು ಎಂದು ಸಲಹೆ ನೀಡಿದರು.

ಸಿದ್ಧಗಂಗಾ ಮೆಡಿಕಲ್ ಕಾಲೇಜು ಮೇಲ್ವಿಚಾರಕ ಡಾ.ನಿರಂಜನಮೂರ್ತಿ ಹಾಗೂ ಶಸ್ತ್ರಚಿಕಿತ್ಸೆಗೆ ಒಳಗಾಗದ ರೋಗಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!