ತುಮಕೂರು: ಪ್ರಾಚೀನ ಶಾಸನಗಳ ಭಾಷೆ ಮತ್ತು ಲಿಪಿಗಳನ್ನು ತಿಳಿದರೆ ಇತಿಹಾಸದ ವೈಭವ ಮತ್ತು ಬದುಕನ್ನು ಅರಿಯಬಹುದು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಹೇಳಿದರು.
ತುಮಕೂರು ವಿಶ್ವ ವಿದ್ಯಾಲಯದ ಸ್ನಾತಕೋತ್ತರ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಿದ್ದ ಭಾರತೀಯ ಶಾಸನಶಾಸ್ತ್ರ ಮತ್ತು ಆಧುನಿಕ ತಂತ್ರಜ್ಞಾನ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಚರಿತ್ರೆಯ ಅಂಶಗಳಾದ ಸಾಮಾಜಿಕ, ಆರ್ಥಿಕ, ರಾಜಕೀಯ ವಿಷಯಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡುಬೇಕು, ಚರಿತ್ರೆಯಲ್ಲಿ ಶಾಸನ ಕ್ಷೇತ್ರ ಬಹಳ ಕುತೂಹಲ ಮೂಡಿಸುವ ಕ್ಷೇತ್ರ, ಈ ಕ್ಷೇತ್ರವನ್ನು ಅಧ್ಯಯನ ಮಾಡಬೇಕಾದರೆ ಕೌಶಲ್ಯ, ಆಸಕ್ತಿ, ಶ್ರದ್ಧೆ ಬಹಳ ಮುಖ್ಯ ಎಂದರು.
ತುಮಕೂರು ವಿವಿ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಮಾತನಾಡಿ, ಇಂದಿನ ಸಮಾಜದಲ್ಲಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಸಂಬಂಧ ಉತ್ತಮವಾದ ಬಾಂಧವ್ಯ ಹೊಂದಿರಬೇಕು. ಶಿಕ್ಷಕರು ಮಾಡುವ ಪಾಠ ಪ್ರವಚನಗಳನ್ನು ಶ್ರದ್ಧೆಯಿಂದ ಗ್ರಹಿಸಬೇಕು, ಕರ್ನಾಟಕದ ವೈವಿಧ್ಯತೆ ಬಗ್ಗೆ ಪೂರ್ಣವಾಗಿ ತಿಳಿಯಬೇಕು ಎಂದರು.
ಕಾರ್ಯಕ್ರಮದ ಸಂಯೋಜಕ ಪ್ರೊ.ಎಂ.ಕೊಟ್ರೇಶ್, ವಿವಿ ಸ್ನಾತಕೋತ್ತರ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ಪ್ರಿಯಾ ಠಾಕೂರ್, ವಿವಿ ಸ್ನಾತಕೋತ್ತರ ಇತಿಹಾಸ ಮತ್ತು ಪ್ರಾಕ್ತನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎಲ್. ಪಿ.ರಾಜು, ಪ್ರೊ.ಶ್ರೀನಿವಾಸ್ ಭಾಗವಹಿಸಿದ್ದರು.
Comments are closed.