ಬಿಜೆಪಿ, ಜೆಡಿಎಸ್ ನವರು ನಮ್ಮ ಕಣ್ಮುಂದೆಯೇ ಒಂದಾಗ್ತಿದ್ದಾರೆ: ಸಚಿವ

123

Get real time updates directly on you device, subscribe now.


ತುಮಕೂರು: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನವರು ನಮ್ಮ ಕಣ್ಮುಂದೆಯೇ ಒಂದಾಗುತ್ತಿರುವುದು ಕಂಡು ಬರುತ್ತಿದೆ. ನಮಗೆ ಈ ಬಗ್ಗೆ ಆತಂಕವಿಲ್ಲ, ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದ ಹೊರ ವಲಯದಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಅತ್ಯಾಧುನಿಕ ತಂತ್ರಜ್ಞಾನದ ಹೊರ ಹೋಗಿಗಳ ವಿಸ್ತರಣಾ ಘಟಕ ಮತ್ತು ಆಸ್ಪತ್ರೆಯ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾಗಿರುವ ಬಹುಮಹಡಿ ಕಟ್ಟಡ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಂಗಾಪೂರ್ ರಾಜಕಾರಣದ ಬಗ್ಗೆ ಈಗಾಗಲೇ ನಮ್ಮ ಪಕ್ಷದ ಅಧ್ಯಕ್ಷರು ಮಾತನಾಡಿದ್ದಾರೆ. ಅವರಿಗೆ ವಿಶೇಷ ಮಾಹಿತಿ ಇರಬಹುದು ಎಂದರು.

ಜೆಡಿಎಸ್ ಮತ್ತು ಬಿಜೆಪಿಯವರು ನಮ್ಮ ವಿರುದ್ಧ ಷಡ್ಯಂತ್ರ ಮಾಡಲು ಒಂದಾಗುತ್ತಿರುವುದನ್ನು ನಾವು ನೋಡುತ್ತಿದ್ದೇವೆ. ಇದರಿಂದ ನಮಗೇನು ಆತಂಕವಿಲ್ಲ, ನಮ್ಮ ಪಕ್ಷದ ಸಚಿವರು, ಶಾಸಕರು ಎಲ್ಲರೂ ಒಗ್ಗಟ್ಟಾಗಿದ್ದೇವೆ. ನಮ್ಮ ಸರ್ಕಾರದ ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡಲಿದೆ, ಇದರಲ್ಲಿ ಯಾವುದೇ ಸಂದೇಹ ಬೇಡ ಎಂದರು.

ಸಚಿವರ ಮೇಲೆ ಶಾಸಕರಿಗೆ ಅಸಮಾಧಾನ ಇದೆ. ಶಾಸಕರು ಸಚಿವರ ವಿರುದ್ಧ ಪತ್ರ ಬರೆದಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನನಗೇನು ಆ ಬಗ್ಗೆ ಮಾಹಿತಿ ಇಲ್ಲ. ಮುಖ್ಯಮಂತ್ರಿಗಳು ಸಿಕ್ಕಿದ್ದರು. ಆ ಬಗ್ಗೆ ಏನೂ ಮಾತನಾಡಲಿಲ್ಲ ಎಂದರು.

Get real time updates directly on you device, subscribe now.

Comments are closed.

error: Content is protected !!