ತುಮಕೂರು: ವಿದೇಶಗಳಲ್ಲಿ ಓದಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಕೇವಲ ಅಂಕಗಳಷ್ಟೇ ಇದ್ದರೆ ಸಾಕಾಗುವುದಿಲ್ಲ, ಅವರು ತೊಡಗಿಸಿಕೊಳ್ಳುವ ಇತರೆ ಚಟುವಟಿಕೆಗಳು ಮುಖ್ಯವಾಗುತ್ತವೆ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ನಾವು ತೋರುವ ಬದ್ಧತೆಯು ನಮ್ಮ ವ್ಯಕ್ತಿತ್ವಕ್ಕೆ ಮೆರುಗು ನೀಡುತ್ತವೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ.ಪ್ರದೀಪ್ ಕುಮಾರ್ ಹೇಳಿದರು.
ವಿದ್ಯಾನಿಧಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ವಿ-ಯುಫೋರಿಯಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಮ್ಮ ಕಾಲೇಜಿನ ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡು ಗುರುತಿಸಿಕೊಳ್ಳುವ ಮೂಲಕ ನಮಗೆ ಒಳ್ಳೆಯ ಹೆಸರು ತಂದುಕೊಡುತ್ತಿದ್ದಾರೆ. ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿದ್ದರೆ ಮಾತ್ರ ಕಲಿಕೆ ಸಂಪೂರ್ಣವಾಗಿ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ.
ಇಂದಿನ ದಿನಮಾನಗಳಲ್ಲಿ ವ್ಯಕ್ತಿಗತ ನಿರ್ವಹಣೆಗಿಂತ ಗುಂಪಿನಲ್ಲಿ ನಮ್ಮ ನಿರ್ವಹಣೆಯೇನು ಎಂಬುದು ಮುಖ್ಯವಾಗಿದೆ, ತಂಡದ ನಾಯಕತ್ವ ವಹಿಸಿಕೊಂಡು ಮುನ್ನಡೆಸುವಲ್ಲಿ ನಾವೆಷ್ಟು ಸಮರ್ಥರು ಎಂಬುದನ್ನು ಈ ಬಗೆಯ ಕಾರ್ಯಕ್ರಮಗಳು ತೋರಿಸಿಕೊಡುತ್ತವೆ. ಎಲ್ಲಾ ವಿದ್ಯಾರ್ಥಿಗಳೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಪ್ರದೀಪ್ ಕುಮಾರ್ ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.
ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಮತ್ತು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Comments are closed.