ಕೋಳಾಲ ಪಿಡಿಒ ಅಮಾನತು

245

Get real time updates directly on you device, subscribe now.


ಕೊರಟಗೆರೆ: ರಾಜ್ಯ ನ್ಯಾಯ ಮಂಡಳಿ ಆದೇಶದಂತೆ ಜಿಲ್ಲಾ ಪಂಚಾಯಿತಿ ಸೂಚನೆ ಮೇರೆಗೆ ತಾಲ್ಲೂಕಿನ ಕೋಳಾಲ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಚ್.ವಿ ಕೋಮಲ ಅವರನ್ನು ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಿ.ದೊಡ್ಡಸಿದ್ದಯ್ಯ ಅವರು ಬುಧವಾರ ಅಮಾನತು ಮಾಡಿದ್ದಾರೆ.

ಫೆಬ್ರುವರಿ 16ರಂದು ಇಲಾಖೆ ವಿಚಾರಣೆ ಕಾಯ್ದಿರಿಸಿ ಕೋಮಲ ಅವರನ್ನು ಅಮಾನತು ಪಡಿಸಲಾಗಿತ್ತು. ಫೆಬ್ರುವರಿ 22ರಂದು ಕೋಮಲ ಅವರು ಅಮಾನತಿಗೆ ರಾಜ್ಯ ಆಡಳಿತ ಮಂಡಳಿಯಿಂದ ತಡೆಯಾಜ್ಞೆ ತಂದು ಕರ್ತವ್ಯದಲ್ಲಿ ಮುಂದುವರೆದಿದ್ದರು.

ಕೋಳಾಲದ ಜೊತೆಗೆ ಹಂಚಿಹಳ್ಳಿ ಗ್ರಾಮ ಪಂಚಾಯಿತಿಗೆ ಹೆಚ್ಚುವರಿಯಾಗಿ ಅಭಿವೃದ್ಧಿ ಅಧಿಕಾರಿ ಕಾರ್ಯಭಾರ ವಹಿಸಲಾಗಿತ್ತು. ಅಮಾನತು ಆದೇಶಕ್ಕೆ ನೀಡಲಾಗಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಿ ಆದೇಶಿಸಿದ ಹಿನ್ನಲೆಯಲ್ಲಿ ಕೊರಟಗೆರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಕೋಮಲ ಅವರನ್ನು ಅಮಾನತು ಪಡಿಸಿ ಆದೇಶಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!