ಪ್ರಥಮ ದರ್ಜೆ ಕಾಲೇಜಿನಲ್ಲಿ ಕೊರೊನಾ ಲಸಿಕೆ ಆಂದೋಲನಕ್ಕೆ ಚಾಲನೆ

201

Get real time updates directly on you device, subscribe now.

ತುಮಕೂರು: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾತ್ಕಾಲಿಕವಾಗಿ ಸ್ಥಾಪಿಸಿರುವ ಕೋವಿಡ್ ಲಸಿಕೆ ಹಾಕುವ ಕೇಂದ್ರದಲ್ಲಿ 2ನೇ ಹಂತದ ಲಸಿಕೆ ನೀಡುವ ಕಾರ್ಯಕ್ಕೆ ಶಾಸಕ ಜಿ.ಬಿ.ಜೋತಿಗಣೇಶ್ ಚಾಲನೆ ನೀಡಿದರು.

ನಗರಪಾಲಿಕೆ, ಆರೋಗ್ಯ ಇಲಾಖೆ ಹಾಗೂ 15ನೇ ವಾರ್ಡಿನ ಕಾರ್ಪೋರೇಟರ್ ಶ್ರೀಮತಿ ಗಿರಿಜಾ ಧನಿಯಕುಮಾರ್ ಅವರ ಭಾಗಿತ್ವದಲ್ಲಿ ನಗರದ ಐದಾರು ವಾರ್ಡುಗಳಿಗೆ ಕೇಂದ್ರ ಸ್ಥಾನದಲ್ಲಿರುವ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಲಸಿಕಾ ಕೇಂದ್ರ ಆರಂಭಗೊಂಡಿದ್ದು, 74 ವರ್ಷದ ಸರಸ್ವತಿ ಎಂಬ ಮಹಿಳೆಯೊಬ್ಬರಿಗೆ ಲಸಿಕೆ ನೀಡುವ ಮೂಲಕ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾತು.

ಈ ವೇಳೆ ಮಾತನಾಡಿದ ಶಾಸಕ ಜಿ.ಬಿ.ಜೋತಿಗಣೇಶ್, ಸಾರ್ವಜನಿಕರ ಹಿತದೃಷ್ಟಿಯಿಂದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಗದೀಶ್ ಅವರು ಒಂದು ಕೊಠಡಿಯನ್ನು ಲಸಿಕಾ ಕೇಂದ್ರವನ್ನಾಗಿ ಬಳಸಿಕೊಳ್ಳಲು ಅನುವು ಮಾಡಿಕೊಟ್ಟಿದ್ದಾರೆ, ಆಸ್ಪತ್ರೆಗೆ ಹೋದಾಗ ಕೊಂಚ ಹಿಂಜರಿಕೆಯಾಗುವುದು ಸಹಜ, ಆದರೆ ಇಲ್ಲಿ ಆ ವಾತಾವರಣವಿಲ್ಲ. ಪಾರ್ಕಿಂಗ್‌ಗೂ ಸಾಕಷ್ಟು ಸ್ಥಳಾವಕಾಶವಿದೆ. ಇದು ಐದಾರು ವಾರ್ಡುಗಳಿಗೆ ಕೇಂದ್ರ ಸ್ಥಾನವಾದ ಕಾರಣ, ಸುತ್ತಮುತ್ತಲ ನಾಗರಿಕರು, ಅದರಲ್ಲಿಯೂ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ನೀಡುವ ಕೊರೊನಾ ಲಸಿಕೆ ಪಡೆದು ನಗರವನ್ನು ಕೊರೊನಾ ಮುಕ್ತಗೊಳಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

ವಾರ್ಡಿನ ಕೌನ್ಸಿಲರ್ ಶ್ರೀಮತಿ ಗಿರಿಜಾ ಧನಿಯಕುಮಾರ್ ಮಾತನಾಡಿ, ಪ್ರಧಾನಮಂತ್ರಿಗಳ ಆಶಯದಂತೆ ಈ ಮಹಾಮಾರಿಯಿಂದ ದೂರವಾಗಲು ಎಲ್ಲರೂ ಲಸಿಕೆ ಪಡೆದುಕೊಳ್ಳುವುದು ಅಗತ್ಯವಾಗಿದೆ.ಈ ನಿಟ್ಟಿನಲ್ಲಿ ನಾಗರಿಕರಲ್ಲಿ ಜಾಗೃತಿ ಮೂಡಿಸಲು ಎಲ್ಲಾ ರೀತಿಯ ಪ್ರಚಾರ ಕಾರ್ಯಗಳನ್ನು ಮಾಡಲಾಗಿದೆ, ಅಲ್ಲದೆ ವಯೋವೃದ್ದರು ಮತ್ತು ಅಶಕ್ತರಿಗಾಗಿ ಉಚಿತ ವಾಹನದ ವ್ಯವಸ್ಥೆಯನ್ನು ಮಾಡಲಾಗಿದೆ, ಜನರು ಇದರ ಸದುಪಯೋಗ ಪಡೆದುಕೊಳ್ಳುವ ಮೂಲಕ ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸುವಂತೆ ಕೋರಿದರು.

ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಜಗದೀಶ,ಶಾಂತಿನಗರ ಪ್ರಾಥಮಿಕ ಆರೋಗ್ಯಕೇಂದ್ರದ ಶ್ರೂಶುಷಕಿ ಶ್ರೀಮತಿ ಅಂಜುಮ್,ಕನ್ನಡ ಸೇನೆ ಅಧ್ಯಕ್ಷ ಧನಿಯಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!