ದೇಶದ ಪ್ರಗತಿಗಾಗಿ ಸಮರ್ಥ ಹೆಜ್ಜೆ ಇಡೋಣ

192

Get real time updates directly on you device, subscribe now.


ತುಮಕೂರು: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ಮಾಡಿದವರನ್ನು ನೆನೆಯುವುದು ನಮ್ಮ ಕರ್ತವ್ಯ, ದೇಶದ ಪ್ರಗತಿಗಾಗಿ ಸಮರ್ಥ ಹೆಜ್ಜೆಗಳನ್ನಿಡುವುದು ನಮ್ಮ ಬದ್ಧತೆಯಾದಲ್ಲಿ ದೇಶವು ಮತ್ತಷ್ಟು ಸುಧಾರಣೆ ಕಾಣುತ್ತದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಕೆ.ಬಿ.ಜಯಣ್ಣ ಹೇಳಿದರು.

ನಗರದ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ವಿದ್ಯಾನಿಧಿ ಕಾಲೇಜಿನ ಸಹಯೋಗದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ. ಪ್ರದೀಪ್ ಕುಮಾರ್ ಮಾತನಾಡಿ, ಈ ಬಾರಿಯ ಸ್ವಾತಂತ್ರ್ಯೋತ್ಸವಕ್ಕೆ ಪ್ರಧಾನ ಮಂತ್ರಿಗಳು ನೀಡಿದ ಕರೆ ದೇಶ ಮೊದಲು, ಯಾವಾಗಲೂ ಮೊದಲು ಎಂಬುದನ್ನು ನಾವು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ವೈಯಕ್ತಿಕ ಸಾಧನೆಗಿಂತಲೂ ಸಮಷ್ಠಿಯಲ್ಲಿ ಸಾಧನೆ ಎಂಬುದು ಹೆಚ್ಚು ಅರ್ಥಪೂರ್ಣವಾಗಿರುತ್ತದೆ. ನಮ್ಮ ದೇಶದ ಪ್ರಗತಿ ಕಳೆದ ಹತ್ತು ವರ್ಷಗಳಿಂದೀಚೆಗೆ ಹಿಂದೆಂದಿಗಿಂತಲೂ ವೇಗವಾಗಿ ಸಾಗಿದೆಯೆಂದರೆ ಅದಕ್ಕೆ ಕಾರಣ ನಮ್ಮ ದೇಶದಲ್ಲಿ ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು, ಭವಿಷ್ಯದ ಕುಡಿಗಳಾದ ಇಂದಿನ ವಿದ್ಯಾರ್ಥಿಗಳು ದೇಶಾಭಿಮಾನವನ್ನು ಎತ್ತರಿಸುವ ನಿಟ್ಟಿನಲ್ಲಿ ಮನಃಪೂರ್ವಕವಾಗಿ ಶ್ರಮಿಸಬೇಕು ಎಂದರು.

ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜು ಮತ್ತು ವಿದ್ಯಾನಿಧಿ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಹಲವು ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಈ ಸಂದರ್ಭದಲ್ಲಿಅಭಿನಂದಿಸಲಾಯಿತು. ಉಪನ್ಯಾಸಕಿ ಊರ್ಮಿಳಾ ನವೀನ್, ಹಾಗೂ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜು ಮತ್ತು ವಿದ್ಯಾನಿಧಿ ಕಾಲೇಜಿನ ಬೋಧಕ, ಬೋಧಕೇತರ ವೃಂದ ಭಾಗವಹಿಸಿದ್ದರು. ದೇಶ ಭಕ್ತಿಗೀತೆಗಳ ಸಮೂಹ ಗಾಯನ, ನೃತ್ಯ, ಪಿರಮಿಡ್ ಮೊದಲಾದುವುಗಳನ್ನು ಪ್ರದರ್ಶಿಸಲಾಯಿತು.

Get real time updates directly on you device, subscribe now.

Comments are closed.

error: Content is protected !!