ಕೋವಿಡ್ ಲಸಿಕೆ ಹಾಕಿಸಿಕೊಂಡು ಆರೋಗ್ಯ ವೃದ್ಧಿಸಿಕೊಳ್ಳಿ

178

Get real time updates directly on you device, subscribe now.

ಶಿರಾ: ಧೈರ್ಯವಾಗಿ ಕೊವೀಡ್- 19 ಲಸಿಕೆ ಹಾಕಿಸಿಕೊಂಡು ಆರೋಗ್ಯ ಶಕ್ತಿ ವೃದ್ಧಿಸಿಕೊಳ್ಳಿ, ಇದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹೇಶ್.ಎಸ್. ತಿಳಿಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ಕೋವಿಡ್- 19 ಲಸಿಕೆ ವಿತರಣೆ ಹಾಗೂ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್- 19 ಲಸಿಕೆ ಹಾಕಿಸಿಕೊಳ್ಳುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ, ದೇಹದಲ್ಲಿ ರೋಗ ನಿರೋಧಕ ಶಕ್ತಿ  ಹೆಚ್ಚಾಗುತ್ತದೆ, ಯಾವುದೇ ಅಡ್ಡ ಪರಿಣಾಮ ಮತ್ತು ತೊಂದರೆ ಉಂಟಾಗುವುದಿಲ್ಲ, ಆದುದ್ದರಿಂದ 45 ವರ್ಷ ಮೇಲ್ಪಟ್ಟ ಎಲ್ಲರೂ ಹಾಕಿಸಿಕೊಳ್ಳಬೇಕು, ಜನರು ಲಸಿಕೆ ಹಾಕಿಸಿಕೊಂಡಾಗ ಸಮುದಾಯದೊಳಗೆ ಕೋವಿಡ್ ತಡೆಗಟ್ಟಲು ಸಾಧ್ಯವಾಗುತ್ತದೆ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ನಗರಸಭಾ ಆರೋಗ್ಯ ಅಧಿಕಾರಿಗಳು ಮನೆ ಮನೆಗೆ ತೆರಳಿ ಲಸಿಕೆ ವಿತರಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಈ ಸಂದರ್ಭದಲ್ಲಿ ಅಧಿಕ ಸಿವಿಲ್ ನ್ಯಾಯಾಧೀಶರಾದ ಗೀತಾ, ತಹಶೀಲ್ದಾರ್ ಮಮತ.ಎಂ, ವಕೀಲರ ಸಂಘದ ಅಧ್ಯಕ್ಷ ಹೆಚ್.ಪಿ.ಧರಣೇಶ ಗೌಡ, ಉಪಾಧ್ಯಕ್ಷ ವೈ.ಟಿ.ರಾಮಚಂದ್ರಪ್ಪ, ಖಜಾಂಚಿ ಎಚ್.ಗುರುಮೂರ್ತಿ, ವಕೀಲರಾದ ರವೀಶ್ ಸೇರಿದಂತೆ ಹಲವರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!