ಶಿರಾ: ಗ್ರಾಮೀಣ ಪ್ರದೇಶಗಳಿಗೆ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬಂದಿರುವವರ ಬಗ್ಗೆ ನಿಗಾ ಇಟ್ಟು ಅವರಿಗೆ ಕೊವಿಡ್ ಪರೀಕ್ಷೆ ಮಾಡಿಸಿ ಗ್ರಾಮಗಳಲ್ಲಿ ಕೋವಿಡ್- 19 ವೈರಸ್ ಹರಡದಂತೆ ಹೆಚ್ಚಿನ ಕ್ರಮ ಕೈಗೊಳ್ಳಿ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಎಸ್.ಲಕ್ಷ್ಮಣ್ ತಿಳಿಸಿದರು.
ತಾಲ್ಲೂಕಿನ ರತ್ನಸಂದ್ರ ಗ್ರಾಮ ಪಂಚಾಯಿತಿಯ ಟಾಸ್ಕ್ ಫೋರ್ಸ್ ಸಮಿತಿ ಸಭೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿ, ಕೋವಿಡ್-19ಗೆ ಸಂಬಂಧಿಸಿದಂತೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ನಿಯಮಿತವಾಗಿ ಕೈಗಳನ್ನು ಸೋಪಿನಿಂದ ತೊಳೆಯುವುದು ಹಾಗೂ ಸ್ಯಾನಿಟೈಸ್ ಮಾಡಿಕೊಳ್ಳುವುದು, ಕೋವಿಡ್ ಲಕ್ಷಣಗಳುಳ್ಳ ವ್ಯಕ್ತಿಗಳನ್ನು ಮನೆ ಮನೆ ಭೇಟಿ ಮಾಡಿ ಗುರುತಿಸಿ ಅವರನ್ನು ಪತ್ತೆ ಹಚ್ಚಿ ಪರೀಕ್ಷೆ ಮಾಡಿಸಲು ಕ್ರಮ ವಹಿಸುವುದು, ನಿಯಮಿತವಾಗಿ ಹೋಂ ಕ್ವಾರಂಟೈನ್‌ನಲ್ಲಿರುವ ಮನೆಗಳಿಗೆ ಭೇಟಿ ನೀಡಿ ಜಿಪಿಎಸ್ ಮಾಡುವುದು ಸೇರಿದಂತೆ ಎಲ್ಲಾ ರೀತಿಯ ಕ್ರಮ ವಹಿಸಬೇಕೆಂದು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಸದಸ್ಯರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.
Comments are closed.