ಕುಣಿಗಲ್: ರಾಜ್ಯ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ, ವಿರೋಧ ಪಕ್ಷಗಳ ಯಾವುದೇ ಟೀಕೆಗೂ ಜಗ್ಗದೆ ಚುನಾವಣೆ ಮುನ್ನ ಘೋಷಿಸಿದಂತೆ ಗ್ಯಾರಂಟಿ ಯೋಜನೆಗಳ ಚಾಲನೆ ನೀಡುತ್ತಿದೆ ಎಂದು ಶಾಸಕ ಡಾ.ರಂಗನಾಥ್ ಹೇಳಿದರು.
ತಾಲೂಕಿನಾದ್ಯಂತ ವಿವಿಧೆಡೆಗಳಲ್ಲಿ ಭಾಗ್ಯಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮಗಳಿಗೆ ತರೇದಕುಪ್ಪೆ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಿ ಮಾತನಾಡಿ, ಭಾಗ್ಯಲಕ್ಷ್ಮೀ ಯೋಜನೆಯಿಂದಾಗಿ ಸ್ತ್ರೀಯರಿಗೆ ಆರ್ಥಿಕ ಸ್ವಾವಲಂಬನೆಗೆ ಸಹಕಾರವಾಗಲಿದೆ, ಬಿಜೆಪಿ ಸರ್ಕಾರದ ಬೆಲೆ ಏರಿಕೆಯ ಕೊಡುಗೆಯಿಂದಾಗಿ ಇಂದು ಮಹಿಳೆಯರು ಜೀವನ ನಿರ್ವಹಣೆ ಮಾಡಲು ಪರದಾಡುವ ಸ್ಥಿತಿ ಇದೆ, ಬೆಲೆ ಏರಿಕೆಯ ಬವಣೆಯಿಂದ ಪಾರು ಮಾಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ, ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ ಮೇಲೆತ್ತಲು ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ, ಅಧಿಕಾರಿಗಳು ಸಹ ಯಾರೆ ಅರ್ಹ ಫಲಾನುಭವಿಗಳು ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು, ಭಾಗ್ಯಲಕ್ಷ್ಮೀ ಯೋಜನೆ ಸೇರಿದಂತೆ ಇತರೆ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳು ಶ್ರಮ ವಹಿಸಬೇಕೆಂದರು.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಸೇರಿದಂತೆ ಪುರಸಭೆಯ ಐದು ಕಡೆಗಳಲ್ಲಿ ಭಾಗ್ಯಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಕಾರ್ಯಕ್ರಮದ ಫಲಾನುಭವಿಗಳು ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಮಾಡಿ ಯೋಜನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ತಾಪಂ ಇಒ ಜೋಸೆಫ್, ತಹಶೀಲ್ದಾರ್ ವಿಶ್ವನಾಥ್ ಇತರರು ಇದ್ದರು.
Comments are closed.