ನಾರಾಯಣ ಗುರು ಸಮಾಜ ಸುಧಾರಕರು

ತುಳಿತಕ್ಕೊಳಗಾದ ಸಮುದಾಯಗಳ ಆರಾಧ್ಯ ದೈವ: ಸಿದ್ದಲಿಂಗಪ್ಪ

196

Get real time updates directly on you device, subscribe now.


ತುಮಕೂರು: ಬ್ರಹ್ಮಶ್ರೀ ನಾರಾಯಣ ಗುರುಗಳು ನಮ್ಮಂತೆ ಸಾಮಾನ್ಯ ಕುಟುಂಬದಲ್ಲಿ ಜನಿಸಿದರೂ ಸಹ ಸಾಮಾಜಿಕ ಸುಧಾರಣೆಗಾಗಿ ಶ್ರಮಿಸುವ ಮೂಲಕ ತುಳಿತಕ್ಕೊಳಗಾದ ಸಮುದಾಯಗಳ ಆರಾಧ್ಯ ದೈವವಾದರು ಎಂದು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲಾ ಆರ್ಯ ಈಡಿಗರ ಸಂಘ, ಶ್ರೀ ನಾರಾಯಣ ಗುರು ಸಮಾಜದ ಸಂಯುಕ್ತಾಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ನಾರಾಯಣ ಗುರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದ ನಂತರ ಮಾತನಾಡಿ, ಇಂತಹ ಮಹನೀಯರ ವಿಚಾರ ಧಾರೆಗಳನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ. ರವಿಕುಮಾರ್ ಮಾತನಾಡಿ, ಶ್ರೀ ನಾರಾಯಣ ಗುರುಗಳ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಮುಂದಿನ ಪೀಳಿಗೆಗೆ ಅವರ ಆದರ್ಶ ಪರಿಚಯಿಸುವ ಸಲುವಾಗಿ ಶ್ರೀನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಲಾಗುತ್ತಿದೆ, ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬರುವ ಅಕ್ಟೋಬರ್ 7 ರಂದು ಜಿಲ್ಲಾ ಮಟ್ಟದಲ್ಲಿ ಬೃಹತ್ ಪ್ರಮಾಣದ ಜಯಂತ್ಯೋತ್ಸವ ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾ ಆರ್ಯ ಈಡಿಗರ ಜಿಲ್ಲಾಧ್ಯಕ್ಷ ಕೆ.ವಿ.ಅಜಯ್ ಕುಮಾರ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಅಸ್ಪಶ್ಯತೆಯಂತಹ ಕೆಟ್ಟ ಆಚರಣೆ ನಿರ್ಮೂಲನೆ ಮಾಡಲು ಶ್ರಮಿಸಿದ ಧೀಮಂತರು ಎಂದು ತಿಳಿಸಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಅಧ್ಯಕ್ಷ ಟಿ.ಕೆ.ಧನಿಯಾ ಕುಮಾರ್ ಮಾತನಾಡಿ, ಆರ್ಯ ಈಡಿಗರ ಸಮಾಜವು ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಸೇರಿದಂತೆ ನಾಡಿನ ಹಲವಾರು ಕ್ಷೇತ್ರಗಳಲ್ಲಿ ತನ್ನದೇ ಆದ ಕೊಡುಗೆ ನೀಡಿದೆ, ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರ್ಕಾರದ ಕಾರ್ಯಕ್ರಮವನ್ನಾಗಿ ಘೋಷಿಸಿ ಆಚರಣೆಗೆ ತಂದಿರುವುದು ಅಭಿನಂದನಾರ್ಹ ಎಂದು ತಿಳಿಸಿದರು.

ಜಿಲ್ಲಾ ನಾರಾಯಣ ಗುರುಗಳ ಸಮಾಜದ ಅಧ್ಯಕ್ಷ ಮಾಧವನ್ ಮಾತನಾಡಿ, ಶ್ರೀ ನಾರಾಯಣ ಗುರುಗಳು 1856ರ ಆಗಸ್ಟ್ 22 ರಂದು ಕೇರಳದ ತಿರುವನಂತಪುರದ ಚೆಂಪಜಂತಿ ಎಂಬ ಪುಟ್ಟ ಹಳ್ಳಿಯಲ್ಲಿ ಮದನ್ ಆಸನ್ ಹಾಗೂ ಪತ್ನಿ ಕುಟ್ಟಿಯಮ್ಮ ದಂಪತಿ ಜನಿಸಿದರು, ಅವರು ರಚಿಸಿದ ಸ್ತೋತ್ರಗಳು ಮತ್ತು ಭಕ್ತಿಗೀತೆಗಳಿಂದ ಸಾಮಾಜಿಕ ಸುಧಾರಣೆ ಕಾಣಲು ಕಾರಣವಾಯಿತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲಾ ಆರ್ಯ ಈಡಿಗರ ಸಂಘದ ಉಪಾಧ್ಯಕ್ಷ ವೆಂಕಟ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಲ್ಲಸಂದ್ರ ಶಿವಣ್ಣ, ಜಂಟಿ ಕಾರ್ಯದರ್ಶಿ ನಾರಾಯಣ್, ಖಜಾಂಚಿ ಲಕ್ಷ್ಮಿನಾರಾಯಣ, ಪದಾಧಿಕಾರಿಗಳಾದ ಪುರುಷೋತ್ತಮ್, ಚಂದ್ರಕಲಾ, ಪ್ರಭಾ ವಸಂತ್, ವಸಂತ್, ರಾಮ ಹನುಮಯ್ಯ, ತೇಜು ವೆಂಕಟಸ್ವಾಮಿ, ಜಿಲ್ಲಾ ನಾರಾಯಣ ಗುರುಗಳ ಸಮಾಜದ ಉಪಾಧ್ಯಕ್ಷ ಮಣಿ, ಕಾರ್ಯದರ್ಶಿ ರಾಜೇಶ್, ಖಜಾಂಚಿ ರಾಜನ್, ರಾಮಚಿನ್ನಯ್ಯ, ವಸಂತರಾಜನ್, ಬೀನಾಬಾಯಿ, ಪ್ರೇಮ ಮಾಧವನ್ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!