ರಾಜ್ಯ ಮಟ್ಟದ ಪತ್ರಿಕಾ ವಿತರಕರ ದಿನಾಚರಣೆ

293

Get real time updates directly on you device, subscribe now.


ತುಮಕೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಸಹಯೋಗದೊಂದಿಗೆ ತುಮಕೂರು ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘದ ವತಿಯಿಂದ 3ನೇ ವರ್ಷದ ರಾಜ್ಯ ಮಟ್ಟದ ಪತ್ರಿಕಾ ವಿತರಕರ ದಿನಾಚರಣೆಯನ್ನು ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಸೆ. 4 ರಂದು ಏರ್ಪಡಿಸಲಾಗಿದೆ.

ಅಂದು ಬೆಳಗ್ಗೆ 9 ಗಂಟೆಗೆ ದಿನಾಚರಣೆ ಪ್ರಯುಕ್ತ ನಗರದ ಟೌನ್ಹಾಲ್ ವೃತ್ತದಿಂದ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಜಾಥಾ ರಥಕ್ಕೆ ಚಾಲನೆ ದೊರೆಯಲಿದ್ದು, ಈ ಜಾಥಾ ರಥವು ಟೌನ್ಹಾಲ್ ಸರ್ಕಲ್ನಿಂದ ಗುಬ್ಬಿ ವೀರಣ್ಣ ಕಲಾಕ್ಷೇತ್ರದ ವರೆಗೆ ನಡೆಯಲಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಹಾಗೂ ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘದ ಅಧ್ಯಕ್ಷ ಚೆಲುವರಾಜ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬೆಳಗ್ಗೆ 11.30ಕ್ಕೆ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ವಹಿಸುವರು, ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸುವರು.
ಮುಖ್ಯ ಅತಿಥಿಗಳಾಗಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್, ಕಾರ್ಮಿಕ ಸಚಿವ ಸಂತೋಷ್ಲಾಡ್, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ಎ.ಪ್ರಭಾಕರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್, ಹಿರಿಯ ಪತ್ರಕರ್ತ ಎಸ್.ನಾಗಣ್ಣ ಪಾಲ್ಗೊಳ್ಳುವರು.

ವಿಶೇಷ ಆಹ್ವಾನಿತರಾಗಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಎಸ್.ಆರ್.ಶ್ರೀನಿವಾಸ್, ಕೆಪಿಸಿಸಿ ಮಾಜಿ ವಕ್ತಾರ ಮುರಳೀಧರ ಹಾಲಪ್ಪ ಭಾಗವಹಿಸುವರು, ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ವಹಿಸುವರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ದಿಕ್ಸೂಚಿ ಭಾಷಣ ಮಾಡುವರು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಮೊದಲ ಮಾತುಗಳನ್ನಾಡುವರು, ಪತ್ರಕರ್ತರಾದ ಸೊಗಡು ವೆಂಕಟೇಶ್.ಜಿ.ವಿ, ಮಲ್ಲಿಕಾರ್ಜುನಯ್ಯ, ಪ್ರೆಸ್ಕ್ಲಬ್ ಅಧ್ಯಕ್ಷ ಶಶಿಧರ್ ದೋಣಿಹಕ್ಲು ಉಪಸ್ಥಿತರಿರುವರು ಎಂದು ವಿವರಿಸಿದರು.

ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವಿತರಕರು ಏನು ಎತ್ತ ಎಂಬ ವಿಷಯ ಕುರಿತ ಗೋಷ್ಠಿಯ ಉದ್ಘಾಟನೆಯನ್ನು ಪತ್ರಕರ್ತರಾದ ಸುದರ್ಶನ್ ಚನ್ನಂಗಿಹಳ್ಳಿ ನೆರವೇರಿಸುವರು, ಅಧ್ಯಕ್ಷತೆಯನ್ನು ಪತ್ರಕರ್ತ ವಸಂತ್ ನಾಡಿಗೇರ್ ವಹಿಸುವರು, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಸುರೇಶ್ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಪತ್ರಕರ್ತ ಕೆ.ಎನ್.ಚನೇಗೌಡ, ಬಿ.ವಿ.ಗಣೇಶ್, ಟಿ.ಎನ್.ಮಧುಕರ್, ಬಸವರಾಜು, ಉಗಮ ಶ್ರೀನಿವಾಸ್ ಉಪಸ್ಥಿತರಿರುವರು.
ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಪ್ರತಿಭಾ ಪುರಸ್ಕಾರ ಹಾಗೂ ಪ್ರಶಸ್ತಿ ವಿತರಣಾ ಸಮಾರಂಭದ ಉದ್ಘಾಟನೆಯನ್ನು ಸಂಸದ ಜಿ.ಎಸ್.ಬಸವರಾಜು ನೆರವೇರಿಸುವರು, ನಗರ ಹಾಗೂ ಜಿಲ್ಲಾಧ್ಯಕ್ಷರಿಗೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಸನ್ಮಾನಿಸುವರು, ಮಹಿಳಾ ವಿತರಕರನ್ನು ಪಾಲಿಕೆ ಆಯುಕ್ತೆ ಬಿ.ಜಿ.ಅಶ್ವಿಜ ಸನ್ಮಾನಿಸುವರು, ಹೊರ ರಾಜ್ಯದ ಸಂಘಟನೆ ಅಧ್ಯಕ್ಷರು, ಪದಾಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ಕುಮಾರ್ ಶಹಪೂರ ವಾಡ್ ಸನ್ಮಾನಿಸುವರು, ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್, ಚಿದಾನಂದಮೂರ್ತಿ, ರಘುರಾಮ್, ತಿಪಟೂರು ಕೃಷ್ಣ, ಹಾರೋಗೆರೆ ಸತೀಶ್ ಅವರು ಉಪಸ್ಥಿತರಿರುವರು ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ದಿನಪತ್ರಿಕೆ ಹಂಚಿಕೆದಾರರ ಸಂಘದ ಗೌರವಾಧ್ಯಕ್ಷ ಟಿ.ಎಲ್.ನರಸಿಂಹಯ್ಯ, ಉಪಾಧ್ಯಕ್ಷ ರಂಗಮುತ್ತಯ್ಯ, ಕಾರ್ಯದರ್ಶಿ ವಾಸುದೇವ ಎನ್. ನಾದೂರು, ನಟರಾಜು ಇದ್ದರು.

Get real time updates directly on you device, subscribe now.

Comments are closed.

error: Content is protected !!