ಕುಣಿಗಲ್: ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಮರು ತನಿಖೆ ಆಗಬೇಕು, ಸೌಜನ್ಯ ಮಹಿಳಾ ಸುರಕ್ಷಾ ಆಯೋಗ ಸ್ಥಾಪನೆ ಆಗಬೇಕು, ಕರ್ತವ್ಯಲೋಪ ಎಸಗಿದ ತನಿಖಾಧಿಕಾರಿಯ ವಿರುದ್ಧ ತನಿಖೆಯಾಗಬೇಕು ಎಂದು ಕೆಆರ್ಎಸ್ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ರಘು ಜಾಣಗೆರೆ ಹೇಳಿದರು.
ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಬೆಳ್ತಂಗಡಿಯಿಂದ ಬೆಂಗಳೂರಿನ ವರೆಗೆ 14 ದಿನಗಳ ದೌರ್ಜನ್ಯದ ವಿರುದ್ಧ ಸೌಜನ್ಯ ಪಾದಯಾತ್ರೆಯ 11ನೇ ದಿನವಾದ ಮಂಗಳವಾರ ಕುಣಿಗಲ್ ತಲುಪಿತು, ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ನಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಎಲ್ಲಾ ಮಕ್ಕಳ ಮತ್ತು ಮಹಿಳಾ ದೌರ್ಜನ್ಯ ಸಂಬಂಧಿತ ಪ್ರಕರಣಗಳು ಪ್ರಾಮುಖ್ಯತೆ ಮೇಲೆ ನಿಗದಿತ ಸಮಯದಲ್ಲಿ ಬಗೆಹರಿಯಬೇಕು, ಮಕ್ಕಳ ಮತ್ತು ಮಹಿಳೆಯರ ಅತ್ಯಾಚಾರ ದೌರ್ಜನ್ಯ ತನಿಖೆ ಮಾಡಲು ವಿಶೇಷ ತನಿಖಾ ಸಂಸ್ಥೆ ರಚನೆ ಆಗಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ 11 ವರ್ಷಗಳ ಹಿಂದೆ ಧರ್ಮಸ್ಥಳದಲ್ಲಿ ಸೌಜನ್ಯ ಎಂಬ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ನಡೆದಿದ್ದು ಪೊಲೀಸರು ಬಂಧಿಸಿದ್ದ ಆರೋಪಿಯನ್ನು ನ್ಯಾಯಾಲಯ ನಿರ್ದೋಷಿ ಎಂದು ತೀರ್ಮಾನಿಸಿ ಬಿಡುಗಡೆಗೊಳಿಸಿದೆ, ನಿಜವಾದ ಆರೋಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದ್ದ ಪೊಲೀಸ್ ಇಲಾಖೆಯ ವಿರುದ್ಧ ಹಾಗೂ ಈ ಪ್ರಕರಣವನ್ನು ರಾಜ್ಯ ಸರ್ಕಾರ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಕೆಆರ್ಎಸ್ ಪಕ್ಷ ನಡೆಸುತ್ತಿರುವ ಪಾದಯಾತ್ರೆಗೆ ರಾಜ್ಯದ ಜನರು ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಈ ಪಾದಯಾತ್ರೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಪಕ್ಷದ ಕಾರ್ಯಕರ್ತರು, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ದೀಪಕ್.ಸಿ.ಎನ್, ರಾಜ್ಯ ಜಂಟಿ ಕಾರ್ಯದರ್ಶಿ ರಘುಪತಿ ಭಟ್, ರಾಜ್ಯ ಉಪಾಧ್ಯಕ್ಷ ಲಿಂಗೇಗೌಡ.ಎಸ್.ಎಚ್, ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್ ಭಟ್ಟರಹಳ್ಳಿ ಮತ್ತು ನರಸಿಂಹ ಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ನಂದಾರೆಡ್ಡಿ, ಆರೋಗ್ಯ ಸ್ವಾಮಿ, ಎಲ್.ಜೀವನ್, ಕೇಶವ್ ಮೂರ್ತಿ, ತಾಲೂಕು ಸಂಘಟನಾ ಕಾರ್ಯದರ್ಶಿ ಮಂಜುನಾಥ, ನಾಗೇಂದ್ರ.ವೈ.ಪಿ. ಹಾಗೂ ಇತರ ಪದಾಧಿಕಾರಿಗಳು ಭಾಗವಹಿಸಿದ್ದರು.
Comments are closed.