ಮೂರು ಡಿಸಿಎಂ ಕೆಎನ್ಆರ್ ವೈಯಕ್ತಿಕ ಹೇಳಿಕೆ

91

Get real time updates directly on you device, subscribe now.


ಗುಬ್ಬಿ: ಮೂರು ಡಿಸಿಎಂ ವಿಚಾರದ ಬಗ್ಗೆ ಸಚಿವ ಕೆ.ಎನ್.ರಾಜಣ್ಣ ಅವರು ಕೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ, ಅದೆಲ್ಲವನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ತಾಲ್ಲೂಕಿನ ಕಸಬಾ ಹೋಬಳಿ ಚಿಕ್ಕೊನಹಳ್ಳಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 99 ಲಕ್ಷ ಅನುದಾನದಲ್ಲಿ ಮನೆ ಮನೆ ನಳ ಸಂಪರ್ಕ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ನಾನು ಈ ವಿಚಾರದ ಬಗ್ಗೆ ಮಾತನಾಡುವುದಿಲ್ಲ, ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಯಾವುದೇ ರೀತಿಯ ಗೊಂದಲ ಇಲ್ಲ, ಭಿನ್ನಾಭಿಪ್ರಾಯವು ಇಲ್ಲ, ಮಾಧ್ಯಮದವರೇ ಏನೇನೋ ಸೃಷ್ಟಿ ಮಾಡಿರಬೇಕು ಬಿಟ್ಟರೆ ಬೇರೇನು ಇಲ್ಲ, ನಮ್ಮ ಪಕ್ಷ ಉತ್ತಮ ಆಡಳಿತ, ಅಭಿವೃದ್ಧಿ ಪರವಾಗಿ ಯೋಚನೆ ಮಾಡುತ್ತಿದೆ ಬಿಟ್ಟರೆ ಬೇರೆ ಯಾವುದೂ ಇಲ್ಲ ಎಂದರು.

ಜೆಡಿಎಸ್ ಮತ್ತು ಬಿಜೆಪಿ ಹೊಂದಾಣಿಕೆ ರಾಜಕೀಯ ಮಾಡುವುದರಿಂದ ಅಲ್ಲಿರುವಂತಹ ಸಾಕಷ್ಟು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ನತ್ತ ಮುಖ ಮಾಡುತ್ತಾರೆ ಎಂದರು.

ತಾಲೂಕಿನ 120 ಗ್ರಾಮಗಳಲ್ಲಿ ಈಗಾಗಲೇ ಜಲ್ ಜೀವನ್ ಯೋಜನೆಯಾಗಿದ್ದು ಮುಂದಿನ ದಿನದಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳಿಗೂ ಲಭ್ಯವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷರಾದ ಸೋಮಶೇಖರ್, ಶಿವಪ್ಪ, ಸದಸ್ಯರಾದ ಉಮಾದೇವಿ, ರಾಧಾ, ಶ್ರೀನಿವಾಸ್, ರಾಜಣ್ಣ, ಲೋಕೇಶ್, ಕೆ.ಆರ್.ವೆಂಕಟೇಶ್ ಇನ್ನಿತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!