ಹಿಂದೂ ಮಹಾ ಗಣಪತಿಯ ವಿಸರ್ಜನಾ ಮಹೋತ್ಸವ

ಕಲಾ ತಂಡಗಳ ಅದ್ಭುತ ಪ್ರದರ್ಶನ- ಡಿಜೆ ಸದ್ದಿಗೆ ಕುಣಿದು ಕುಪ್ಪಳಿಸಿದ ಯುವಕರು

121

Get real time updates directly on you device, subscribe now.


ತುಮಕೂರು: ನಗರದ ಟೌನ್ಹಾಲ್ ವೃತ್ತದಲ್ಲಿರುವ ನಾಗರಕಟ್ಟೆ ದೇವಾಲಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾ ಗಣಪತಿಯ ವಿಸರ್ಜನಾ ಕಾರ್ಯಕ್ರಮ ವಿವಿಧ ಕಲಾ ತಂಡಗಳ ಪ್ರದರ್ಶನ ಹಾಗೂ ಅದ್ದೂರಿ ಮೆರವಣಿಗೆ ಮೂಲಕ ನಡೆಯಿತು.

ವಿಶ್ವ ಹಿಂದೂ ಪರಿಷತ್, ಭಜರಂಗದಳ ತುಮಕೂರು ಇವರ ನೇತೃತ್ವದಲ್ಲಿ ಪ್ರತಿಷ್ಠಾಪಿಸಿದ್ದ 6ನೇ ವರ್ಷದ ಹಿಂದೂ ಮಹಾ ಗಣಪತಿಯ ಅದ್ದೂರಿ ವಿಸರ್ಜನಾ ಮಹೋತ್ಸವಕ್ಕೆ ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು.

ಈ ವೇಳೆ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸಾಮೀಜಿ, ತಂಗನಹಳ್ಳಿ ಮಠದ ಬಸಲಿಂಗ ಸ್ವಾಮೀಜಿ, ಬೆಳ್ಳಾವೆಯ ಕಾರದೇಶ್ವರ ಮಠದ ಶ್ರೀಕಾರದ ವೀರಬಸವ ಸ್ವಾಮೀಜಿ, ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಅರೆ ಶಂಕರ ಮಠದ ಶ್ರೀಚೈತನ್ಯ ಮಹಾ ಸ್ವಾಮೀಜಿ ಸೇರಿದಂತೆ ಹಲವಾರು ಹರಗುರು ಚರಮೂರ್ತಿಗಳು ಹಿಂದು ಗಣಪತಿ ವಿಸರ್ಜನಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.
ಗಣಪತಿ ಮೂರ್ತಿಯೊಂದಿಗೆ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿ, ದತ್ತಾತ್ರೇಯ, ಭಜರಂಗಿ, ಲೋಕಮಾನ ತಿಲಕ್ ಅವರ ಸ್ತಬ್ದ ಚಿತ್ರಗಳ ಮೆರವಣಿಗೆ ಸಹ ಹಮ್ಮಿಕೊಳ್ಳಲಾಗಿತ್ತು.

ಮೆರವಣಿಗೆಯ ಪ್ರಮುಖ ಆಕರ್ಷಣೆಯಾದ ಪುಣೇರಿ ಡೋಲ್, ನಂದಿ ಧ್ವಜ, ವೀರಗಾಸೆ, ಡಂಕವಾದ್ಯ, ತಮಟೆ ವಾದ್ಯ ನೋಡುಗರ ಗಮನ ಸೆಳೆದರೆ ಡಿಜೆ ಸದ್ದಿಗೆ ಯುವಕರು, ಯುವತಿಯರು ಕುಣಿದು ಕುಪ್ಪಳಿಸಿದರು.
ಇನ್ನು ಪಟಾಕಿ, ಸಿಡಿಮದ್ದುಗಳ ಪ್ರದರ್ಶನದೊಂದಿಗೆ ನಗರದ ಬಿಜಿಎಸ್ ವೃತ್ತದಿಂದ ಆರಂಭಗೊಂಡ ಮೆರವಣಿಗೆ ಲಕ್ಕಪ್ಪ ವೃತ್ತದಿಂದ ಜೆ.ಸಿ.ರಸ್ತೆ ಮೂಲಕ ಮಾರ್ಕೆಟ್ ಮಾರ್ಗವಾಗಿ ಮಂಡಿಪೇಟೆ, ಸ್ವತಂತ್ರ್ಯ ಚೌಕ, ಅಶೋಕ ರಸ್ತೆ, ಬಿ.ಎಚ್.ರಸ್ತೆ, ಎಂ.ಜಿ.ರಸ್ತೆ, ಜೈನ್ ಟೆಂಪಲ್ ರಸ್ತೆ, ರಾಮಪ್ಪ ವೃತ್ತ, ಅಂಬೇಡ್ಕರ್ ರಸ್ತೆಯ ಮೂಲಕ ಕೋಟೆ ಆಂಜನೇಯ ಸ್ವಾಮಿ ವೃತ್ತ ತಲುಪಿತು, ತದನತರ ಗಾರ್ಡನ್ ರಸ್ತೆ ಮಾರ್ಗವಾಗಿ ಚಿಕ್ಕಪೇಟೆಯ ಕೆಎನ್ಎಸ್ ರೈಸ್ ಮಿಲ್ ಹಿಂಭಾಗದಲ್ಲಿರುವ ಕಲ್ಯಾಣಿಯಲ್ಲಿ ವಿಸರ್ಜಿಸಲಾಯಿತು.

ಮೆರವಣಿಗೆಯಲ್ಲಿ ಮಹಾ ಗಣಪತಿ ಸ್ವಾಗತ ಸಮಿತಿಯ ಅಧ್ಯಕ್ಷ ಟಿ.ಬಿ.ಶೇಖರ್, ಗೌರವಾಧ್ಯಕ್ಷ ಸಿ.ವಿ.ಮಹದೇವಯ್ಯ, ಕಾರ್ಯದರ್ಶಿ ಜಿ.ಕೆ.ಶ್ರೀನಿವಾಸ್, ಕೋರಿ ಮಂಜುನಾಥ್, ಸಹ ಕಾರ್ಯದರ್ಶಿ ನರಸಿಂಹ ಮೂರ್ತಿ, ಖಜಾಂಚಿ ಆರ್.ಎಲ್.ರಮೇಶ್ಬಾಬು, ನಿರ್ದೇಶಕರಾದ ಕೆ.ಎಸ್.ಮಂಜುನಾಥ್, ಹೆಚ್.ಜಿ.ಚಂದ್ರಶೇಖರ್, ಮೋಹನ್ಲಾಲ್, ಮಹೇಂದ್ರ ವೈಶ್ಣವ್, ಮಾರಣ್ಣ ಪಾಳೆಗಾರ್,ಅಮರನಾಥ ಶೆಟ್ಟಿ, ಟಿ.ಎನ್.ಅಜಿತ್, ಪಿ.ಮೂರ್ತಿ, ಜಿ.ಕೇಶವಮೂರ್ತಿ, ಪ್ರಸನ್ನಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!