ಹಾಸ್ಟೆಲ್ಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ: ತುಳಸಿ

145

Get real time updates directly on you device, subscribe now.


ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ನಗರದ ಅಂತರಸನ ಹಳ್ಳಿಯಲ್ಲಿರುವ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿ, ನಿಲಯವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಎಲೆಕ್ಟ್ರಿಕ್ ವೈರ್ಗಳು ಕೈಗೆಟಕದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೆ, ನಿಲಯದ ಮೇಲ್ಮಹಡಿ ಮೇಲೆ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲ ಆಗುವಂತೆ ಛಾವಣಿ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರಲ್ಲದೆ ಇದರಿಂದ ಕಟ್ಟಡ ಮಳೆ ನೀರಿನಿಂದಾಗಿ ಸೋರಿಕೆಯಾಗುವುದನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ ಹಾಗೂ ತಾಲ್ಲೂಕು ಅಧಿಕಾರಿ ಗೀತಮ್ಮ ಮತ್ತಿತರರು ಇದ್ದರು.

ನಂತರ ಜಿಲ್ಲಾಸ್ಪತ್ರೆಯಲ್ಲಿರುವ ಟ್ರಾಮಾ ಕೇರ್ ಸೆಂಟರ್ಗೆ ಭೇಟಿ ನೀಡಿದ ಅವರು ಉದ್ಘಾಟನೆಯಾಗಿದ್ದರೂ ರೋಗಿಗಳಿಗೆ ಈವರೆಗೂ ಸೇವೆ ಒದಗಿಸದೆ ಇರುವ ಬಗ್ಗೆ ಪ್ರಶ್ನಿಸಿದಾಗ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ವೀಣಾ ಉತ್ತರಿಸಿ ಟ್ರಾಮಕೇರ್ ಸೆಂಟರ್ಗೆ ನೇಮಕ ಮಾಡಿಕೊಂಡಿರುವ ಮಾನವ ಸಂಪನ್ಮೂಲಕ್ಕೆ ತರಬೇತಿ ನೀಡಲಾಗುತ್ತಿದೆ ಹಾಗೂ ಅಪಘಾತ ಚಿಕಿತ್ಸಾ ಕೇಂದ್ರಕ್ಕೆ ಅಗತ್ಯವಿರುವ ಉಪಕರಣಗಳ ಸ್ಥಳಾಂತರ ಕಾರ್ಯ ನಡೆಯುತ್ತಿರುವುದರಿಂದ ಅಕ್ಟೋಬರ್ 5ರ ಗುರುವಾರದಿಂದ ಸೇವೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!