ಶಿರಾ: ಹೆಣ್ಣು ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ, ಮದುವೆ ಬೇಡ ಚೆನ್ನಾಗಿ ಓದಬೇಕು ಎಂಬ ವಿದ್ಯಾರ್ಥಿಯ ಕೂಗಿಗೆ ಮರುಗದೆ ಕೊಲೆ ಮಾಡಿರುವುದು ಖಂಡನೀಯ, ಆರೋಪಿ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ ಶಾಸಕ ಡಾ.ಸಿ.ಎಂ.ರಾಜೇಶ್ಗೌಡ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ತಾಲೂಕಿನ ದೊಡ್ಡಗುಳ ಗೊಲ್ಲರಹಟ್ಟಿಯಲ್ಲಿ ಇತ್ತೀಚೆಗೆ ಮದುವೆಯಾಗಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಯನ್ನು ಹಾಡಹಗಲೆ ಕೊಲೆ ಮಾಡಲಾಗಿತ್ತು, ಘಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಪುಟ್ಟ ಪುಟ್ಟ ಹಳ್ಳಿಗಳ ಚಿಲ್ಲರೆ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ, ಇದರಿಂದ ಯುವಕರು ಕುಡಿತದ ಚಟಕ್ಕೆ ಬಲಿಯಾಗುತ್ತಿದ್ದಾರೆ, ಅಲ್ಲದೆ ಕುಡಿದು ಹುಡಗಿಯರನ್ನು ಕೆಟ್ಟ ದೃಷ್ಟಿಯಿಂದ ನೋಡುವ ಸ್ಥಿತಿ ನಿರ್ಮಾಣವಾಗಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿದ್ದು, ಅಬಕಾರಿ ಮತ್ತು ಪೊಲೀಸ್ ಅಧಿಕಾರಿಗಳಿಗೆ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಸೂಚಿಸಲಾಗಿದೆ ಎಂದರು.
ಹೆಣ್ಣು ಮಕ್ಕಳು ಪದವಿ ಶಿಕ್ಷಣ ಪಡೆಯಲು ನಾಲ್ಕೆ ದು ಕಿ.ಮೀ ದೂರದ ಹಳ್ಳಿಗಳಿಂದ ಸೈಕಲ್ ಇಲ್ಲವೆ, ನಡೆದುಕೊಂಡು ಶಿರಾ ನಗರಕ್ಕೆ ಬರುವ ಸ್ಥಿತಿ ಇದೆ, ಇದರಿಂದ ಇಂತಹ ಅನಾಹುತ ಸಂಭವಿಸುವ ಸಾಧ್ಯತೆ ಇರುವ ಕಾರಣ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಹೆಣ್ಣು ಮಕ್ಕಳ ರಕ್ಷಣೆ ನಮ್ಮ ಹೊಣೆಗಾರಿಕೆಯಾಗಿದ್ದು ಶಿರಾ ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಕುಸಿದಿಲ್ಲ, ದೊಡ್ಡಗುಳ ಗೊಲ್ಲರಹಟ್ಟಿಯಲ್ಲಿ ನಡೆದ ದುರ್ಘಟನೆಯಂತ ಪ್ರಕರಣ ಮರುಕಳಿಸದಂತೆ ನೋಡಿ ಕೊಳ್ಳಬೇಕು, ಜನ ಸಾಮಾನ್ಯ ಮತ್ತು ಪೊಲೀಸರ ಸ್ನೇಹ ಭಾಂದವ್ಯ ಹೆಚ್ಚು ಮಾಡುವ ಉದ್ದೇಶದಿಂದ ಪ್ರತಿ ಹಳ್ಳಿಯಲ್ಲಿ ಬೀಟ್ ವ್ಯವಸ್ಥೆ ಕಟ್ಟು ನಿಟ್ಟುಗೊಳಿಸಿ ಕಠಿಣ ಕಾನೂನಿನ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಕಾಲೇಜುಗಳಿಗೆ ಭೇಟಿ ನೀಡಿ ಹೆಣ್ಣು ಮಕ್ಕಳು ಸ್ವರಕ್ಷಣೆ ಮಾಡಿ ಕೊಳ್ಳುವ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸಿ ಜನ ಸ್ನೇಹಿ ಪೊಲೀಸ್ ಎಂಬ ಪದಕ್ಕೆ ಅರ್ಥ ನೀಡ ಬೇಕೆಂದರು. ತಹಸೀಲ್ದಾರ್ ಎಂ.ಮಮತ, ಶಿರಾ ಗ್ರಾಮಾಂತರ ಸಿಪಿಐ ರವಿಕುಮಾರ್ ಇತರರು ಇದ್ದರು.
ಹೆಣ್ಣು ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ: ಶಾಸಕ
Get real time updates directly on you device, subscribe now.
Prev Post
Next Post
Comments are closed.