ಕಮ್ಯುನಿಸ್ಟ್ ಪಕ್ಷದಿಂದ ಜನಾಗ್ರಹ ಚಳಿವಳಿ ಅ.7ಕ್ಕೆ

109

Get real time updates directly on you device, subscribe now.


ತುಮಕೂರು: ಸಾಮಾಜಿಕ ಕಳಕಳಿಯ ಬದ್ಧತೆ ಹೊತ್ತು ಭಾರತೀಯ ಕಮ್ಯುನಿಸ್ಟ್ ಪಕ್ಷ ಜನಾಗ್ರಹ ಚಳಿವಳಿ ಅ.7 ರಂದು ಪ್ರತಿಭಟನೆ ಮತ್ತು ಮೆರವಣಿಗೆ ನಡೆಸಲಿದೆ, ಕೊಟ್ಟ ಭರವಸೆ ಈಡೇರಿಸಿ ಜನರ ನೈಜ ಸಮಸ್ಯೆ ಪರಿಹರಿಸಲು ಅಕ್ಟೋಬರ್ 7 ರಂದು ಬೆಳಗ್ಗೆ 11 ಟೌನ್ಹಾಲ್ ಸರ್ಕಲ್ನಿಂದ ಜಿಲ್ಲಾಧಿಕಾರಿ ಕಚೇರಿಗಳ ವರೆಗೆ ಮೆರವಣಿಗೆಯ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದಿನ 40% ಪಸೆರ್ಟ್ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತು ಬದಲಾವಣೆ ಬಯಸಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ತಂದಿದ್ದಾರೆ, ಬಹುಮತದಿಂದ ಆಡಳಿತಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿಗೊಳಿಸುವ ಬರದಲ್ಲಿ ಬೆಲೆ ಏರಿಕೆ ಮತ್ತು ತೆರಿಗೆ ಹೊರೆ ಮಾಡಿ ಜನರಿಗೆ ಬೇಸರ ತಂದಿದೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿದ್ದಾರೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಜನತೆಗೆ ಆರು ಗ್ಯಾರಂಟಿ ಕೊಟ್ಟಿದ್ದು ಅವುಗಳಲ್ಲಿ ಐದು ಗ್ಯಾರಂಟಿ ಜಾರಿಗೊಳಿಸಿದೆ, ಆದರೆ ಬೆಲೆ ಏರಿಕೆಯಿಂದ ತತ್ತರಿಸಿದ್ದ ಜನತೆಗೆ ತಾತ್ಕಾಲಿಕವಾದ ನೆರವು ನೀಡಿದೆ, ಸರ್ಕಾರದ ಈ ನಡೆಯನ್ನು ಭಾರತೀಯ ಕಮ್ಯನಿಸ್ಟ್ ಪಕ್ಷ ಸ್ವಾಗತಿಸುತ್ತದೆ ಎಂದರು.

ಸಂಘಟಿತ ಕಾರ್ಮಿಕ ವರ್ಗದ ವಿಚಾರದಲ್ಲಿ ಈಗಿನ ಸರ್ಕಾರ ಮಲತಾಯಿ ಧೋರಣೆ ಹೊಂದಿದೆ, ಕಾರ್ಮಿಕ ಸವಲತ್ತು ಕಾರ್ಯಕ್ರಮಕ್ಕೆ ಸಂಬಂಧ ಭಾರತೀಯ ಕಮ್ಯುನಿಸ್ಟ್ ಪಕ್ಷ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಂಡಿದ್ದು, ಸಂಘಟಿತ ಕಾರ್ಮಿಕರಿಗಾಗಿ ಘೋಷಿಸಿದ ಆರನೇ ಗ್ಯಾರಂಟಿ ಜಾರಿಗೊಳಿಸಬೇಕೆಂದು ಆಗ್ರಹಿಸುತ್ತಾ ಕಾಂಗ್ರೆಸ್ ಪಕ್ಷ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಕೆಲವು ಪ್ರಮುಖ ಭರವಸೆ ಈಡೇರಿಸುವಂತೆ ಒತ್ತಾಯಿಸಿ ಮತ್ತು ಜನ ಸಮುದಾಯದ ಎದುರಿಸುತ್ತಿರುವ ಜ್ವಲಂತ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಅಕ್ಟೋಬರ್ 7 ರಂದು ರಾಜ್ಯಾದ್ಯಂತ ಜನಾಗ್ರಹ ಚಳವಳಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.

ತುಮಕೂರು ನಗರದಲ್ಲಿಯೂ ಸಿಪಿಐ ನೇತೃತ್ವದಲ್ಲಿ ಜಿಲ್ಲಾ ಘಟಕ ತುಮಕೂರು ಟೌನ್ಹಾಲ್ ಸರ್ಕಲ್ನಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ಪ್ರತಿಭಟನೆ ಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕಂಬೇಗೌಡ, ಜಿಲ್ಲಾ ಖಜಾಂಚಿ ಅಶ್ವಥ್ ನಾರಾಯಣ್, ಜಿಲ್ಲಾ ಸಹ ಕಾರ್ಯದರ್ಶಿ ಚಂದ್ರಶೇಖರ್, ಗೋವಿಂದರಾಜು, ರಾಮಕೃಷ್ಣ, ಶಶಿಕಾಂತ್, ರುದ್ರಪ್ಪ ಇತರರು ಇದ್ದರು.

Get real time updates directly on you device, subscribe now.

Comments are closed.

error: Content is protected !!