ಧ್ವಜ ನೆಟ್ಟು ದಸರಾ ಉತ್ಸವಕ್ಕೆ ಚಾಲನೆ

113

Get real time updates directly on you device, subscribe now.


ತುಮಕೂರು: ತುಮಕೂರು ಜಿಲ್ಲಾ ದಸರಾ ಉತ್ಸವ ಸಮಿತಿಯಿಂದ ಆಯೋಜಿಸಿರುವ 33ನೇ ವರ್ಷದ ದಸರಾ ಉತ್ಸವಕ್ಕೆ ಧ್ವಜ ನೆಡುವ ಮೂಲಕ ಇಂದು ಅಧಿಕೃತ ಚಾಲನೆ ನೀಡಲಾಯಿತು.

ಅಕ್ಟೋಬರ್ 21 ರಿಂದ 24 ವರೆಗೆ ನಡೆಯುವ ದಸರಾ ಉತ್ಸವಕ್ಕೆ ಸಿದ್ಧತೆ ಆರಂಭವಾಗಿದ್ದು ತಾಯಿ ಭಾರತಮಾತೆಯ ಭಾವಚಿತ್ರದೊಂದಿಗೆ ಭಗವದ್ ಧ್ವಜವನ್ನು ಧಾರ್ಮಿಕ ವಿಧಿ ವಿಧಾನಗಳ ಮೂಲಕ ನೆಟ್ಟು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆಯನ್ನು ದಸರಾ ಉತ್ಸವ ಸಮಿತಿಯ ಅಧ್ಯಕ್ಷ ಬಿ.ಎಸ್.ಮಂಜುನಾಥ್, ಕಾರ್ಯಾಧ್ಯಕ್ಷ ಡಾ.ಪರಮೇಶ್, ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್, ಕಾರ್ಯದರ್ಶಿ ಟೈಲರ್ ಮಹೇಶ್, ಖಜಾಂಚಿ ಜಿ.ಎಸ್.ಬಸವರಾಜು, ಎಂ.ವಿ.ನಾಗ ರಾಜರಾವ್, ಸಂಯೋಜಕರಾದ ಗೋವಿಂದರಾವ್, ಸತ್ಯಮಂಗಲ ಸದಾಶಿವಯ್ಯ ಧ್ವಜಕ್ಕೆ ಪೂಜೆ ಸಲ್ಲಿಸಿ ಶಂಕ, ಜಾಗಟೆ, ಮಹಿಳೆಯರಿಂದ ಲಲಿತ ಸಹಸ್ರನಾಮ ಪಠಣದ ಮೂಲಕ ನೆರೆವೇರಿತು.

ದಸರಾ ಉತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ.ಪರಮೇಶ್ ಮಾತನಾಡಿ, ನಗರದ ಸರಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಅಕ್ಟೋಬರ್ 21 ರಿಂದ 24ರ ವರೆಗೆ ನಡೆಯುವ ನಾಲ್ಕು ದಿನಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ದಸರಾ ಅಧಿಕೃತವಾಗಿ ಚಾಲನೆ ನೀಡಲಾಗಿದೆ, ಕೆ.ಆರ್.ಬಡಾವಣೆಯ ಶ್ರೀರಾಮ ಮಂದಿರದಲ್ಲಿ ಗಣ ಹೋಮ ನಡೆದಿದ್ದು, ತದನಂತರ ಡಾ.ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ದಸರಾ ನಾಟಕೋತ್ಸವಕ್ಕೆ ಚಾಲನೆ ನೀಡಲಾಗಿದೆ, ಹಾಗೆಯೇ ಭಾನುವಾರ ಸಂಜೆ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ನಗರದಲ್ಲಿ ಸುಮಾರು 28 ಕಿ.ಮೀ ದೀಪಾಲಂಕಾರಕ್ಕೆ ಚಾಲನೆ ನೀಡಿದ್ದು, ಇಡೀ ನಗರವೇ ನವರಾತ್ರಿ ಉತ್ಸವಕ್ಕೆ ನವ ವಧುವಿನಂತೆ ಸಿಂಗಾರಗೊಂಡಿದೆ, ನಗರ ಮತ್ತು ಜಿಲ್ಲೆಯ ಜನತೆ ನಾಡ ಹಬ್ಬ ದಸರಾದಲ್ಲಿ ಪಾಲ್ಗೊಂಡು ಕಣ್ತುಂಬಿಕೊಳ್ಳುವಂತೆ ಮನವಿ ಮಾಡಿದರು. ಈ ವೇಳೆ ಹಲವಾರು ಗಣ್ಯರು, ಮಹಿಳೆಯರು ಪಾಲ್ಗೊಂಡಿದ್ದರು.

Get real time updates directly on you device, subscribe now.

Comments are closed.

error: Content is protected !!