ದಸರಾ ಹಬ್ಬ ಆಚರಣೆಗೆ ಮಾರ್ಗಸೂಚಿ ಪಾಲಿಸಿ: ಡೀಸಿ

66

Get real time updates directly on you device, subscribe now.


ತುಮಕೂರು: ತುಮಕೂರು ಜಿಲ್ಲಾ ವ್ಯಾಪ್ತಿಯಲ್ಲಿ ದಸರಾ ಹಬ್ಬ ಆಚರಣೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಸಾರ್ವಜನಿಕವಾಗಿ ತೊಂದರೆಯುಂಟಾಗದಂತೆ ಹಾಗೂ ಶಾಂತಿಯುತವಾಗಿ ಹಬ್ಬ ಆಚರಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮ ಅನುಸರಿಸುವಂತೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆಯೋಜಕರಿಗೆ ಸೂಚಿಸಿದ್ದಾರೆ.

ಹಬ್ಬ ಆಚರಿಸುವ ಸಂದರ್ಭದಲ್ಲಿ ಆಯೋಜಕರು ಕಡ್ಡಾಯವಾಗಿ ಸಂಬಂಧಪಟ್ಟ ಸ್ಥಳದ ಮಾಲೀಕರು ಹಾಗೂ ಇಲಾಖೆಗಳಿಂದ ಅನುಮತಿ ಪಡೆಯುವುದು, ದಸರಾ ಹಬ್ಬದ ಹಿನ್ನೆಲೆಯಲ್ಲಿ ನಡೆಸುವ ಮೆರವಣಿಗೆಗೆ ಸಂಬಂಧಪಟ್ಟ ಪೊಲೀಸ್ ಠಾಣೆ, ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು, ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಸರ್ಕಾರದ ಮಾರ್ಗಸೂಚಿ ಮತ್ತು ನಿಯಮಾವಳಿ ಪಾಲಿಸಬೇಕು, ಸಿಡಿಮದ್ದು ಉಪಯೋಗಿಸುವ ಸಂಬಂಧ ಸರ್ಕಾರದ ಮಾರ್ಗಸೂಚಿ ಹಾಗೂ ನಿಯಮಾವಳಿ ಪಾಲಿಸುವುದು, ದಸರಾ ಹಬ್ಬ ಆಚರಣೆ ಸಂದರ್ಭದಲ್ಲಿ ಯಾವುದೇ ರೀತಿಯಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗದಂತೆ ಸಾರ್ವಜನಿಕವಾಗಿ ದಸರಾ ಹಬ್ಬ ಆಚರಣೆ ಮಾಡಲು ಆಯೋಜಕರು ಕ್ರಮ ವಹಿಸಬೇಕು.

ಕಾರ್ಯಕ್ರಮದ ಆಯೋಜಕರು ಸಂಬಂಧಪಟ್ಟ ಇಲಾಖೆಗಳ ಪೂರ್ವಾನುಮತಿ ಪಡೆಯದೇ ಯಾವುದೇ ಕಾರ್ಯಕ್ರಮ ಆಯೋಜನೆ ಮಾಡತಕ್ಕದ್ದಲ್ಲ, ತಪ್ಪಿದಲ್ಲಿ ಸಂಬಂಧಪಟ್ಟ ಆಯೋಜಕರನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು, ಸಾರ್ವಜನಿಕವಾಗಿ ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ವೈದ್ಯಕೀಯ ಮತ್ತು ಅಗ್ನಿಶಾಮಕ ಸಿಬ್ಬಂದಿ ಸೇವೆ ಪಡೆಯಲು ಆಯೋಜಕರು ಕ್ರಮ ವಹಿಸುವುದು, ಭದ್ರತಾ ದೃಷ್ಟಿಯಿಂದ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಪಡೆದುಕೊಳ್ಳುವುದು, ಕಾರ್ಯಕ್ರಮದ ಆಯೋಜಕರು ಕಾರ್ಯಕ್ರಮದ ಆಯೋಜನೆಯ ಬಗ್ಗೆ ಸಂಪೂರ್ಣವಾಗಿ ಜವಾಬ್ದಾರಿ ವಹಿಸಬೇಕು ಎಂದು ಸೂಚಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!