ತುಮಕೂರು ವಿವಿಯಲ್ಲಿ 17ನೇ ಕನ್ನಡ ವಿಜ್ಞಾನ ಸಮ್ಮೇಳನ

76

Get real time updates directly on you device, subscribe now.


ತುಮಕೂರು: ವಿಶ್ವವಿದ್ಯಾನಿಲಯವು ಸ್ವದೇಶಿ ವಿಜ್ಞಾನ ಆಂದೋಲನ ಕರ್ನಾಟಕ ಇವರ ಸಹಭಾಗಿತ್ವದಲ್ಲಿ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಹಕಾರದೊಂದಿಗೆ ಅ.27 ರಿಂದ 29ರ ವರೆಗೂ 17ನೇ ಕನ್ನಡ ವಿಜ್ಞಾನ ಸಮ್ಮೇಳನ ಆಯೋಜಿಸಲಾಗಿದೆ.

ಅ.27 ಬೆಳಗ್ಗೆ 09:30 ಗಂಟೆಗೆ ಗೃಹ ಮಂತ್ರಿ ಡಾ.ಜಿ. ಪರಮೇಶ್ವರ್ ಅವರು 17ನೇ ಕನ್ನಡ ವಿಜ್ಞಾನ ಸಮ್ಮೇಳನವನ್ನು ಉದ್ಘಾಟಿಸುವರು. ತುಮಕೂರಿನಶ್ರೀ ಸಿದ್ಧಗಂಗಾ ಕ್ಷೇತ್ರದ ಶ್ರೀಸಿದ್ಧಲಿಂಗ ಮಹಾಸ್ವಾಮಿಜೀ ಅವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಸಹಕಾರಿ ಸಚಿವ ಕೆ.ಎನ್.ರಾಜಣ್ಣ, ತುಮಕೂರು ಲೋಕಸಭಾಕ್ಷೇತ್ರದ ಸಂಸದ ಜಿ.ಎಸ್.ಬಸವರಾಜು, ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಶಾಸಕ ಟಿ.ಬಿ.ಜಯಚಂದ್ರ, ಸ್ವದೇಶಿ ವಿಜ್ಞಾನ ಆಂದೋಲನದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣೀಕ್, ವಿವಿ ಕುಲಸಚಿವೆ ನಾಹಿದಾ ಜಮ್ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನಕುಮಾರ್ ಕೆ.ಭಾಗವಹಿಸಲಿದ್ದಾರೆ. ವಿಜ್ಞಾನಿ ಡಾ.ಬಿ.ಎನ್.ಸುರೇಶ್ ಅವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

2023ನೇ ಸಾಲಿನ ಭಾರತರತ್ನಡಾ.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ
DEBEL, ಡಿ.ಆರ್.ಡಿ.ಓ.ನಿರ್ದೇಶಕ ಡಾ.ಟಿ.ಎಂ.ಕೊಟ್ರೇಶ್ ಅವರಿಗೆ, ಡಾ.ಭೀಮ್ ಸೇನ್ ಜೋಶಿ ಸಾಂಸ್ಕೃತಿಕ ವಿಜ್ಞಾನ ಪುರಸ್ಕಾರವನ್ನು ಕರ್ನಾಟಕ ಸಂಗೀತ ವಿದ್ವಾಂಸರಾದ ವಿದ್ವಾನ್ ಎಸ್. ಶಂಕರ್ಅವರಿಗೆ, ಡಾ.ಸಿ.ಎನ್.ಆರ್.ರಾವ್ ವಿಜ್ಞಾನ ಪುರಸ್ಕಾರವನ್ನು ಹಿರಿಯ ವಿಜ್ಞಾನಿ ಹಾಗೂ ಐ.ಐ.ಎಸ್.ಸಿ. ಪ್ರಾಧ್ಯಾಪಕ ಡಾ.ಎಂ.ಎಂ.ನಾಯಕ್ ಅವರಿಗೆ ನೀಡಿ ಗೌರವಿಸಲಾಗುತ್ತಿದೆ.

ಈ ಸಮ್ಮೇಳನದಲ್ಲಿ ರಾಜ್ಯದ 300ಕ್ಕೂ ಹೆಚ್ಚು ವಿಜ್ಞಾನಿಗಳು, ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳಿಂದ ವೈಜ್ಞಾನಿಕ ಲೇಖನ, ಪ್ರಬಂಧಗಳನ್ನು ಕನ್ನಡದಲ್ಲಿ ಮಂಡಿಸಲಿದ್ದಾರೆ.
ಈ ಸಂದರ್ಭದಲ್ಲಿ ಯಶಸ್ವಿ ಚಂದ್ರಯಾನವನ್ನು ಸಾಧಿಸಿರುವ ದೇಶದ ಪ್ರತಿಷ್ಠಿತ ಇಸ್ರೋ ಸಂಸ್ಥೆಯ ‘ಸ್ಪೇಸ್ ಅನ್ ವೀಲ್ಸ್’ ಸಾಧನೆಗಳ ಪ್ರದರ್ಶನವನ್ನು 3 ದಿನಗಳ ಕಾಲ ಸಮ್ಮೇಳನಾವಧಿಯಲ್ಲಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ಪ್ರದರ್ಶನವನ್ನು ವೀಕ್ಷಿಸಲು ಮುಕ್ತ ಅವಕಾಶವಿರುತ್ತದೆ.

Get real time updates directly on you device, subscribe now.

Comments are closed.

error: Content is protected !!