ಬಾವಲಿ ಬೇಟೆಯಾಡುತ್ತಿದ್ದವರ ಬಂಧನ

119

Get real time updates directly on you device, subscribe now.


ತುಮಕೂರು: ಮಾಂಸಕ್ಕಾಗಿ ಬಾವಲಿಗಳನ್ನು ಬೇಟೆಯಾಡಿದ್ದವರನ್ನು ಅರಣ್ಯ ಇಲಾಖಾಧಿಕಾರಿಗಳು ಬಂಧಿಸಿ ಕೊಂದ ಬಾವಲಿಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಜಿಲ್ಲೆಯ ಕುಣಿಗಲ್ ತಾಲೂಕಿನ ಕಾಡರಾಮನಹಳ್ಳಿ ಗ್ರಾಮದ ಖಾಸಗಿ ವ್ಯಕ್ತಿಗೆ ಸೇರಿದ ಜಮೀನಿನಲ್ಲಿ ಮರದಲ್ಲಿದ್ದ ಬಾವಲಿಗಳನ್ನು ಬೇಟೆಯಾಡುತ್ತಿರುವ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಅರಣ್ಯ ಇಲಾಖಾಧಿಕಾರಿಗಳು ವಲಯ ಅರಣ್ಯಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿ, ಮೃತ ಬಾವಲಿ ಹಾಗೂ ಬೇಟೆಗೆ ಬಳಸಿದ್ದ ಬಂದೂಕು ಇತರೆ ಸಾಮಾಗ್ರಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಮಾಗಡಿಯ ಹೊಂಬಾಳಮ್ಮ ಪೇಟೆಯ ರಂಗನಾಥ, ರಾಮಕೃಷ್ಣ, ಶಿವಶಂಕರ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ತುಮಕೂರು ತಾಲ್ಲೂಕು ಮಾದನಾಯಕನ ಪಾಳ್ಯ ಸಮೀಪ ನವಿಲುಗಳನ್ನು ಬೇಟೆಯಾಡಿ ತಿನ್ನುತ್ತಿದ್ದವರನ್ನು ಬಂಧಿಸಲಾಗಿತ್ತು, ಇದೀಗ ಬಾವಲಿಗಳನ್ನು ಬೇಟೆಯಾಡುತ್ತಿದ್ದವರನ್ನು ಬಂಧಿಸಲಾಗಿದೆ, ಕಾಡು ಪ್ರಾಣಿ, ಪಕ್ಷಗಳನ್ನು ಬೇಟೆಯಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!