ಚುನಾವಣೆ ನಂತರ ಗ್ಯಾರಂಟಿ ಭಾಗ್ಯ ಸಿಗಲ್ಲ

75

Get real time updates directly on you device, subscribe now.


ಕುಣಿಗಲ್: ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆ ವರೆಗೂ ಮಾತ್ರ, ಚುನಾವಣೆ ನಂತರ ಜನತೆಗೆ ಯಾವುದೇ ಗ್ಯಾರಂಟಿ ಭಾಗ್ಯ ಸಿಗುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ಹೇಳಿದರು.
ಗುರುವಾರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸುಮಾರು 54 ಸಾವಿರ ಸರ್ಕಾರಿ ಶಾಲೆಗಳಿದ್ದು ದುಸ್ಥಿತಿಯಲ್ಲಿವೆ, ಇವುಗಳ ಬಗ್ಗೆ ಗಮನ ಹರಿಸದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭಾಗ್ಯದ ಮೂಲಕ ತೆರಿಗೆ ಹಣ ವಿತರಿಸುತ್ತಿದ್ದು ಬಹುತೇಕ ಜನರಿಗೆ ಯೋಜನೆಗಳ ಸವಲತ್ತು ಸಿಗದೆ ಜನ ದಾಖಲೆ ಹಿಡಿದುಕೊಂಡು ಕಚೇರಿಗೆ ಅಲೆದಾಡುತ್ತಿದ್ದಾರೆ, ಇವರ ಗ್ಯಾರಂಟಿ ಯೋಜನೆ ಬಗ್ಗೆ ನಮಗೆ ತಕರಾರು ಇಲ್ಲ, ಆದರೆ ಜನರ ಶೋಷಣೆ ಖಂಡನೀಯ, ಇದೆ ಜನ ಇವರಿಗೆ ತಕ್ಕ ಪಾಠ ಕಲಿಸುತ್ತಾರೆ, ಜನತೆಗೆ ನೀಡಿರುವ ಗ್ಯಾರಂಟಿ ಯೋಜನೆಗೆ ಅನುದಾನ ಹೊಂದಿಸಲಾಗದ ಕಾಂಗ್ರೆಸ್ ಸರ್ಕಾರ ಇತರೆ ಯಾವದೆ ಅಭಿವೃದ್ಧಿ ಕೆಲಸ ಮಾಡದೆ ರಾಜ್ಯವನ್ನು ಹಿಂದುಳಿಯುವಂತೆ ಮಾಡಿದೆ, ಕೇಂದ್ರದಲ್ಲಿ ಮೋದಿಜಿ ನೇತೃತ್ವದ ಬಿಜೆಪಿ ಸರ್ಕಾರ ಹಲವಾರು ಜನಪರ ಯೋಜನೆ ಜಾರಿ ಮಾಡಿದ್ದು, ಯೋಜನೆಗಳನ್ನು ಕಾರ್ಯಕರ್ತರು ಜನರ ಮನೆ ಬಾಗಿಲಿಗೆ ತಲುಪಿಸುವ ಮೂಲಕ 2024ರ ಲೋಕಸಭೆ ಚುನಾವಣೆಯಲ್ಲೂ ಅತ್ಯಧಿಕ ಸ್ಥಾನ ಪಡೆಯುವ ಮೂಲಕ ಪುನಹ ಅಧಿಕಾರಕ್ಕೆ ಬರಲಿದೆ, ಶಿಕ್ಷಣದಲ್ಲೂ ರಾಜಕಾರಣ ಮಾಡಿದ ಕಾಂಗ್ರೆಸ್ ಪಕ್ಷ ಯುವ ಜನತೆಗೆ ಅನುಕೂಲಕರವಾಗಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆದು ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸಿದೆ, ರಾಜ್ಯದಲ್ಲಿ ಪುನಹ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಆಗ್ರಹಿಸಿ ಪೋಷಕರು, ವಿದ್ಯಾರ್ಥಿಗಳಿಂದ ಕೋಟಿ ಸಹಿ ಸಂಗ್ರಹ ಕಾರ್ಯಕ್ರಮ ಶೀಘ್ರದಲ್ಲೆ ನೂತನ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ನಡೆಸಲಾಗುವುದು ಎಂದರು.

ಈಗಾಗಲೆ ಶಿಕ್ಷಕರ ಕ್ಷೇತ್ರದ ಚುನಾವಣೆ ಘೋಷಣೆಯಾಗಿದ್ದು, ಮತದಾರರ ಪಟ್ಟಿಯಿಂದ ಬಿಡಲಾಗಿದ್ದ ಹತ್ತು ಸಾವಿರ ಶಿಕ್ಷಕರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿದ್ದು, ಅಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಈಗಾಗಲೆ ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿರುವ ಹಾಲಿ ಎಂಎಲ್ಸಿ ವೈ.ಎ.ನಾರಾಯಣ ಸ್ವಾಮಿ ಪುನಹ ಅಭ್ಯರ್ಥಿಯಾಗಿದ್ದು ಮೂರನೆ ಬಾರಿಗೂ ಅವರನ್ನೆ ಆಯ್ಕೆ ಮಾಡುವ ಮೂಲಕ ಶಿಕ್ಷಕರು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು, ಈ ಬಾರಿ ವೈಎಎನ್ ಬೆಂಬಲಿಸುವಂತೆ ಮನವಿ ಮಾಡಿದರು.
ಪಿ ಎಲ್ ಡಿ ಬ್ಯಾಂಕ್ ರಾಜ್ಯಾಧ್ಯಕ್ಷ ಡಿ.ಕೃಷ್ಣಕುಮಾರ್, ತಾಲೂಕು ಬಿಜೆಪಿ ಅಧ್ಯಕ್ಷ ಬಲರಾಮ, ಪ್ರಮುಖರಾದ ದೇವರಾಜ, ಆನಂದಕುಮಾರ, ಆನಂದ, ಸುರೇಶ್, ರಮಾನಂದ ಇತರರು ಇದ್ದರು

Get real time updates directly on you device, subscribe now.

Comments are closed.

error: Content is protected !!