ಅಕ್ರಮ ಮದ್ಯ ಮಾರಾಟ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ

340

Get real time updates directly on you device, subscribe now.

ಶಿರಾ: ಹೆಣ್ಣು ಮಕ್ಕಳ ರಕ್ಷಣೆ ನಮ್ಮ ಹೊಣೆಗಾರಿಕೆಯಾಗಿದ್ದು, ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಕುಸಿದಿಲ್ಲ, ದೊಡ್ಡಗುಳ ಗೊಲ್ಲರಹಟ್ಟಿಯಲ್ಲಿ ನಡೆದ ದುರ್ಘಟನೆ ಪ್ರಕರಣ ಮರುಕಳಿಸದಂತೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜನಸಾಮಾನ್ಯ ಮತ್ತು ಪೊಲೀಸರ ಸ್ನೇಹ ಭಾಂದವ್ಯ ವೃದ್ಧಿಸುವ ಉದ್ದೇಶದಿಂದ ಪ್ರತಿ ಹಳ್ಳಿಯಲ್ಲಿ ಬೀಟ್ ವ್ಯವಸ್ಥೆ ಕಟ್ಟು ನಿಟ್ಟುಗೊಳಿಸಿ ಕಠಿಣ ಕಾನೂನಿನ ಬಗ್ಗೆ ಅರಿವು ಮೂಡಿಸಿ ಎಂದು ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಾಲ್ಲೂಕಿನ ಮಿನಿ ವಿಧಾನಸೌಧದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ ಇತ್ತೀಚೆಗೆ ದೊಡ್ಡಗುಳ ಗ್ರಾಮದಲ್ಲಿ ಕಾಲೇಜು ಯುವತಿಯನ್ನು ಯುವಕನೊಬ್ಬ ಹತ್ಯೆಗೈದಿರುವುದು ಆತಂಕಕಾರಿ ವಿಷಯವಾಗಿದ್ದು, ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲಾ ಕಾಲೇಜುಗಳಿಗೆ ಕಳುಹಿಸಲು ಭಯಪಡುವಂತಾಗಿದೆ. ಇಂತಹ ದುರ್ಘಟನೆಗಳು ಮುಂದೆ ಎಂದಿಗೂ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಬಕಾರಿ ಅಧಿಕಾರಿಗಳು ತಾಲ್ಲೂಕಿನಲ್ಲಿ ಎಲ್ಲಿಯೇ ಅಕ್ರಮ ಮದ್ಯ ಮಾರಾಟ ನಡೆದರೂ ಕೂಡಲೇ ಕಾರ್ಯ ಪ್ರವೃತ್ತರಾಗಿ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ಗ್ರಾಮೀಣ ಪ್ರದೇಶಗಳಲ್ಲಿ ಯುವಕರಿಗೆ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮ ಮಾಡಬೇಕು, ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು. ಕಾನೂನಿನ ತಿಳುವಳಿಕೆ ಮೂಡಿಸಿದರೆ ಮುಂದೆ ಇಂತಹ ಘಟನೆ ನಡೆಯದೆ ಇರಲು ಸಾಧ್ಯವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಮತ, ಗ್ರಾಮಾಂತರ ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರವಿಕುಮಾರ್, ಪೌರಾಯುಕ್ತ ಪರಮೇಶ್ವರಪ್ಪ, ಅಬಕಾರಿ ನಿರೀಕ್ಷಕ ನಾಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಶಂಕರಯ್ಯ ಇತರರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!