ನ್ಯಾಯಾಲಯ ಪ್ರಕರಣ ಶೀಘ್ರ ಇತ್ಯರ್ಥಗೊಳಿಸಿ

ಎಸಿ, ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಶ್ರೀನಿವಾಸ್ ಸೂಚನೆ

58

Get real time updates directly on you device, subscribe now.


ತುಮಕೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಆರ್ ಸಿಸಿಎಂಎಸ್ (ರೆವಿನ್ಯೂ ಕೋರ್ಟ್ ಕೇಸ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶದಲ್ಲಿ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕೆಂದು ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಕೆ.ಶ್ರಿನಿವಾಸ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ, ಜಿಲ್ಲೆಯಲ್ಲಿ ನಡೆದ ಎಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಐಪಿಜಿಆರ್ ಎಸ್ ಮೂಲಕ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಸ್ವೀಕೃತಿಯಾಗಿರುವ ಅರ್ಜಿಗಳನ್ನು ತಮ್ಮಲ್ಲಿ ಉಳಿಸಿಕೊಳ್ಳದೆ ವಿಲೇವಾರಿ ಮಾಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಹೇಳಿದರು.

ಕರ್ನಾಟಕ ಭೂಕಂದಾಯ ಅಧಿನಿಯಮದಡಿ ಪ್ರತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ರಚಿಸಬೇಕಿದ್ದು, ಅದರಂತೆ ಗುಬ್ಬಿ ಮತ್ತು ತುರುವೇಕೆರೆ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಮಿತಿ ರಚನೆ ಕುರಿತು ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ, ಅಂತೆಯೇ ಮಧುಗಿರಿ ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಮಿತಿ ರಚನೆ ಬಗ್ಗೆ ಪರಿಶೀಲಿಸಿ ಮರು ಪ್ರಸ್ತಾವನೆ ಸಲ್ಲಿಸುವಂತೆ ಮಧುಗಿರಿ ತಹಶೀಲ್ದಾರ್ ಗೆ ತಿಳಿಸಿದರು.
ಜಿಲ್ಲೆಯ ಆಶ್ರಯ, ವಸತಿ ಯೋಜನೆಗೆ ಜಮೀನು ಮಂಜೂರಾತಿಗಾಗಿ 473 ಗ್ರಾಮಗಳಲ್ಲಿ 964.19 ಎಕರೆ ಜಮೀನನ್ನು ಗುರುತಿಸಿ ಅನುಮೋದನೆಗೆ ಸಲ್ಲಿಸಲಾಗಿದೆ, ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಆಟದ ಮೈದಾನ ಜಮೀನು ಮಂಜೂರಾತಿಗಾಗಿ 122.02 ಎಕರೆಗೆ ಪ್ರಸ್ತಾವನೆಗಳ ಅನುಮೋದನೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಗಿದ್ದು, ಬಾಕಿ ಪ್ರಸ್ತಾವನೆಗಳನ್ನು ಶೀಘ್ರ ಸಲ್ಲಿಸುವಂತೆ ಸೂಚಿಸಿದರು.

ಎಲ್ಲಾ ತಹಶೀಲ್ದಾರರು ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಈ- ಆಫೀಸ್ ತಂತ್ರಾಂಶದ ಮೂಲಕವೇ ಕಡತಗಳನ್ನು ಸ್ವೀಕೃತಿ ಮಾಡಿಕೊಳ್ಳಬೇಕು, ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು, ಯಾವುದೇ ಕಡತಗಳನ್ನು ಭೌತಿಕವಾಗಿ ವಿಲೇವಾರಿ ಮಾಡಬಾರದು ಎಂದು ಹೇಳಿದರು.
ತಾಲ್ಲೂಕು ಮಟ್ಟದಲ್ಲಿ ಎಲ್ಲಾ ತಹಶಿಲ್ದಾರ್ ಗಳು ಕಡ್ಡಾಯವಾಗಿ ಟಾಸ್ಕ್ಪೋರ್ಸ್ ಸಭೆ ನಡೆಸಿ ನಡಾವಳಿಗಳನ್ನು ಸಲ್ಲಿಸಬೇಕು ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪ ವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!